ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ತೀರ್ಥಹಳ್ಳಿ ನಡುವಿನ ಮಂಡಗದ್ದೆ ಸಮೀಪ ಸಿಂಗನಬಿದರೆ ಕ್ರಾಸ್ ನಲ್ಲಿ ಸ್ಕೂಟಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನೆಡೆದಿದೆ.
ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಸಮೀಪದ ಹೊಸಮನೆ ಗಿರೀಶ್ ಎಂದು ತಿಳಿದುಬಂದಿದೆ. ಈತ ಮಂಡಗದ್ದೆಯಲ್ಲಿ ಊಟ ಮಾಡಿ ಶಿವಮೊಗ್ಗದ ಕಡೆ ತೆರಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಅಕ್ಷಯ್ ಕುಮಾರ್