ಅಭಿವೃದ್ಧಿಯನ್ನು ಸಹಿಸದೆ ಪುಕ್ಕಟೆ ಪ್ರಚಾರಕ್ಕಾಗಿ ಪರಿತಪಿಸುತ್ತಿರುವ ಬೇಳೂರು : ಬಿಜೆಪಿ ಅರೋಪ

ರಿಪ್ಪನ್‌ಪೇಟೆ;-ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೇಸ್ ಪಕ್ಷದ ವಕ್ತಾರ ಗೋಪಾಲಕೃಷ್ಣ ಬೇಳೂರು ಹಾಲಿ ಶಾಸಕ ಹರತಾಳು ಹಾಲಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಪುಕ್ಕಟೆ ಪ್ರಚಾರಕ್ಕಾಗಿ ತಮ್ಮ ಬೆಂಬಲಿಗರೊAದಿಗೆ ಸುಳ್ಳು ಹಾಗೂ ನಿರಾಧಾರ ಅರೋಪ ಮಾಡುತ್ತಿದ್ದಾರೆಂದು ಕೆರೆಹಳ್ಳಿ-ಹುಂಚಾ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ ಅರೋಪಿಸಿದರು.

ರಿಪ್ಪನ್‌ಪೇಟೆ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇತ್ತೀಚೆಗೆ ಸುರಿದ ಭಾರಿಮಳೆಯಿಂದಾಗಿ ಕೆರೆಹಳ್ಳಿ ಹೋಬಳಿಯ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ-ಮಳವಳ್ಳಿ ಕನ್ನೇಹೊಂಡದ ನೀರು ನುಗ್ಗಿ ರಸ್ತೆ ಕೊಚ್ಚಿಹೋಗಿ ಸಾರ್ವಜನಿಕರು ಓಡಾಡದಂತಾಗಿರುವ ಬಗ್ಗೆ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ನಿರ್ಲಕ್ಷವೇ ಕಾರಣವೆಂದು ಅರೋಪಿಸಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.



2004 ರಲ್ಲಿ ಕ್ಷೇತ್ರದ ಶಾಸಕರಾಗಿದ್ದ ಹಾಲಪ್ಪನವರ ಅವಧಿಯಲ್ಲಿ ಈ ರಸ್ತೆಗಳು ಅಭಿವೃದ್ದಿಪಡಿಸಲಾಗಿತು.ಆನಂತರದಲ್ಲಿ ಬೇಳೂರು ಹಾಗೂ ಕಾಗೋಡು ತಿಮ್ಮಪ್ಪ ನವರು ಶಾಸಕರಾಗಿ ಅಯ್ಕೆಯಾದರೂ ಕೂಡಾ ಈ ಭಾಗದಲ್ಲಿನ ರಸ್ತೆ ಸೇತುವೆಗಳು ಇವರಿಗೆ ಕಾಣಲಿಲ್ಲವೇ ಈಗ ಚುನಾವಣೆ ಬರುತ್ತಿರುವ ಸಂದರ್ಭವನ್ನು ಬಳಸಿಕೊಂಡು ಪುಕ್ಕಟೆ ಪ್ರಚಾರಕ್ಕಾಗಿ ಸಲ್ಲದ ಅರೋಪ ಮಾಡುತ್ತಿರುವ ಗೋಪಾಲಕೃಷ್ಣರಿಗೆ ಬಹಿರಂಗ ಸವಾಲು ಹಾಕುವುದರೊಂದಿಗೆ ಕ್ಷೇತ್ರದ ಶಾಸಕರು ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಅಭಿವೃದ್ದಿ ಕಾಮಗಾರಿಗಾಗಿ 9-75 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿಸಿದ್ದಾರೆ ಅದರಲ್ಲಿ ಬರುವ ಮುಡುಬ ಮಳವಳ್ಳಿ ತಮ್ಮಡಿಕೊಪ್ಪ ಸಂಪರ್ಕ ರಸ್ತೆ ಅಭಿವೃದ್ದಿಗೆ 30 ಲಕ್ಷ ರೂ ಅರಸಾಳು ಕೊಳವಂಕ ಬಸವಾಪುರ ರಸ್ತೆ ದುರಸ್ಥಿಗೆ 40 ಲಕ್ಷ ರೂ.ಹಾರೋಹಿತ್ತಲು ಮಚಲಿಜಡ್ಡು ಅಡ್ಡೇರಿ ರಸ್ತೆಗೆ 30 ಲಕ್ಷ ರೂ.ಆಕಾಶಮಕ್ಕಿ ರಸ್ತೆಗೆ 25 ಲಕ್ಷ ರೂ ಅರಸಾಳು ಗ್ರಾಮದ ಎಸ್.ಸಿ ಕಾಲೋನಿ ಸಂಪರ್ಕದ ಕಾAಕ್ರೇಟ್ ರಸ್ತೆಗೆ 25 ಲಕ್ಷ ರೂ ಹಾರೋಹಿತ್ತಲು ಹೆಡ್ತಿರೆ ಮನೆ ರಸ್ತೆ ದುರಸ್ಥಿಗೆ 10 ಲಕ್ಷ ರೂ,ಮುಡುಬ ತಮ್ಮಡಿಕೊಪ್ಪ ರಸ್ತೆ ಅಭಿವೃದ್ದಿಗೆ 55 ಲಕ್ಷ ರೂ,ಬಸವಾಪರ-ಗುಂಡ್ರುಮೂಲೆ ರಸ್ತೆಗೆ 55 ಲಕ್ಷ ರೂ,ಹೀಗೆ ಹತ್ತು ಹಲವು ಅಭಿವೃದ್ದಿ ಕಾಮಗಾರಿಗಳಿಗಾಗಿ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಲಾಗಿದ್ದು ಮಾಜಿ ಶಾಸಕ ಗೋಪಾಲಕೃಷ್ಣರ ಅವಧಿಯಲ್ಲಿ ಬಿಡುಗಡೆಯಾದ ಅಭಿವೃದ್ದಿ ಅನುದಾನದ ಪಟ್ಟಿಯೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಗೊತ್ತಾಗುತ್ತದೆ ಎಂದು ಸವಾಲು ಹಾಕಿದರು.



ನಂತರ ಮಾತನಾಡಿದ ಬಿಜೆಪಿ ಮುಖಂಡ ಆನಂದ್ ಮೆಣಸೆ ಬೇಳೂರು ಗೋಪಾಲಕೃಷ್ಣ ಚುನಾವಣೆ ಹತ್ತಿರ ಬರುತಿದ್ದಂತೆ ರಾಜಕೀಯ ಗಿಮಿಕ್ ಮಾಡಲು ಹೊರಟಿದ್ದಾರೆ.ಇತ್ತೀಚೆಗೆ ತಮ್ಮಡಿಕೊಪ್ಪದಲ್ಲಿ ನಡೆದ ಪ್ರತಿಭಟನೆಯಲ್ಲಿ ಬೇಳೂರು ಬೆಂಬಲಿಗರು ಬಿಟ್ಟರೆ ಗ್ರಾಮಸ್ಥರು ಯಾರು ಇರಲಿಲ್ಲ ಕೇವಲ ರಾಜಕೀಯ ಅಸ್ತಿತ್ವಕ್ಕೆ ಪ್ರತಿಭಟನೆ ಮಾಡುತಿದ್ದಾರೆ ಎಂದು ಆರೋಪಿಸಿದರು. ಬೇಳೂರು ಮೊದಲು ಹಿರಿಯ ರಾಜಕಾರಣಿಗಳ ಬಗ್ಗೆ ನಾಲಗೆ ಹರಿಯಬಿಡುವುದನ್ನು ನಿಲ್ಲಿಸಬೇಕು ಹಾಗೇಯೆ ಅವರ  ಅವಧಿಯಲ್ಲಿ ಬಿಡುಗಡೆಯಾದ ಅಭಿವೃದ್ದಿ ಅನುದಾನದ ಪಟ್ಟಿಯೊಂದಿಗೆ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರೊಂದಿಗೆ ಸಾರ್ವಜನಿಕ ವೇದಿಕೆಯಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.



ಸುದ್ದಿಗೋಷ್ಠಿಯಲ್ಲಿ ಎಂ.ಸುರೇಶ್‌ಸಿಂಗ್,ಎನ್.ಸತೀಶ್ ಮತ್ತು ಅರಸಾಳು ಗ್ರಾಪಂ ಮಾಜಿ ಅಧ್ಯಕ್ಷ ಲೋಕೇಶ್ ಹಾಗೂ ಶಾಸಕರ ಅಪ್ತ ಸಹಾಯಕ ಕೀರ್ತಿಗೌಡ ಕುಕ್ಕಳಲೆ ಹಾಜರಿದ್ದರು.


ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

9 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

9 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

9 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

14 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

16 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago