ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಅಗಸ್ಟ್ 24ರಂದು ತೀರ್ಥಹಳ್ಳಿ ತಾಲ್ಲೂಕಿನ ವೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು ತೀರ್ಥಹಳ್ಳಿ ತಾಲ್ಲೂಕಿನ ರಕ್ತದಾನಿಗಳು, ಸಮಸ್ತ ಜನತೆ ಹಾಗೂ ಶ್ರೀ ವಿನಯ್ ಗುರೂಜಿಯವರ ಭಕ್ತರು ಸಮಸ್ತ ಜನತೆ ರಕ್ತದಾನ ಮಾಡಿ ಇನ್ನೊಂದು ಜೀವ ಕಾಪಾಡಲು ಮನವಿ ಮಾಡಲಾಗಿದೆ.
ಮೇಗರವಳ್ಳಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ ನಡೆಯುತ್ತಿದ್ದು ಇದೇ ಸಂದರ್ಭದಲ್ಲಿ ಈ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿದೆ.
ಅವಧೂತ ವಿನಯ್ ಗುರೂಜಿಯವರ ಭಕ್ತ ವೃಂದ, ತೀರ್ಥಹಳ್ಳಿ ಅವರ ಆಶ್ರಯದಲ್ಲಿ ಪುನೀತ್ ಬ್ರಿಗೇಡ್, ನಮ್ಮೂರ್ ಎಕ್ಸ್ ಪ್ರೆಸ್ ಮಾಧ್ಯಮ ಸಂಸ್ಥೆ ಮತ್ತು ರೋಟರಿ ಇಎಂಐ, ತೀರ್ಥಹಳ್ಳಿ, ಮೆಗ್ಗಾನ್ ಆಸ್ಪತ್ರೆ ರಕ್ತ ನಿಧಿ ಸಂಸ್ಥೆಗಳು ಸೇರಿ ಈ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.
ಸಾರ್ವಜನಿಕರು ಹಾಗೂ ವಿನಯ್ ಗುರೂಜಿಯವರ ಭಕ್ತರು ತಪ್ಪದೇ ರಕ್ತದಾನ ಮಾಡಬೇಕಾಗಿ ಈ ಮೂಲಕ ಮನವಿ ಮಾಡಲಾಗಿದೆ.
ದಿನಾಂಕ: ಆ.24, ಬುಧವಾರ
ಸಮಯ: 9:30ರಿಂದ 2 ಗಂಟೆವರೆಗೆ
ಸ್ಥಳ: ಸರ್ಕಾರಿ ಪ್ರೌಢಶಾಲೆ
ಮೇಗರವಳ್ಳಿ, ತೀರ್ಥಹಳ್ಳಿ ತಾಲೂಕು
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್