ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಡಿವೈಎಸ್ಪಿ ಶಾಂತವೀರ ಉದ್ಘಾಟನೆ ಮಾಡಿದರು.
ಮೇಗರವಳ್ಳಿ ಪ್ರೌಢಶಾಲೆಯಲ್ಲಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದ, ಪುನೀತ್ ಬ್ರಿಗೇಡ್, ನಮ್ಮೂರ್ ಎಕ್ಸ್ಪ್ರೆಸ್ ಮಾಧ್ಯಮ ಸಂಸ್ಥೆ, ರೋಟರಿ ಬ್ಲಡ್ ಬ್ಯಾಂಕ್, ಮೆಗ್ಗಾನ್ ಆಸ್ಪತ್ರೆ ರಕ್ತ ನಿಧಿ ಸಹಯೋಗದಲ್ಲಿ ನಡೆದ ರಕ್ತದಾನ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಕೂಡ ಭಾಗವಹಿಸಿ ರಕ್ತದಾನಿಗಳಿಗೆ ಶುಭ ಕೋರಿದರು.
ಜೆಡಿಎಸ್ ಮುಖಂಡರಾದ ಯಡೂರು ರಾಜಾರಾಂ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟೇಶ್ ಹೆಗ್ಡೆ, ಮುಖ್ಯ ಶಿಕ್ಷಕರಾದ ದಿವಾಕರ್, ಮೆಗ್ಗಾನ್ ಆಸ್ಪತ್ರೆ ಡಾ. ರಕ್ಷಿತಾ, ಪ್ರಮೋದ್, ಲಲಿತಮ್ಮ ಚಾರಟೇಬಲ್ ಟ್ರಸ್ಟ್ ಅಧ್ಯಕ್ಷ ವಿಜೇತ ಶೆಟ್ಟಿ, ತೀರ್ಥಹಳ್ಳಿ ರೋಟರಿ ಬ್ಲಡ್ ಬ್ಯಾಂಕ್ ಪ್ರಮುಖರಾದ ಅರುಣ್, ನಮ್ಮೂರ್ ಎಕ್ಸ್ ಪ್ರೆಸ್ ಸಂಪಾದಕರಾದ ರಾಘವೇಂದ್ರ ತೀರ್ಥಹಳ್ಳಿ, ಭಕ್ತವೃಂದದ ಅಭಿಲಾಷ್, ದೀಪು, ವಿಶಾಲ್ ಕುಮಾರ್, ಹೊದಲ ಶಿವು ಇತರರು ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್