ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಆಗುಂಬೆ ಘಾಟಿಯಲ್ಲಿ ಮರ ಉರುಳಿ ಬಿದ್ದ ಘಟನೆ ನಡೆದಿದೆ.
ಈ ಘಟನೆಯಿಂದ ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ,ಮರ ಬಿದ್ದಿರುವ ಹಿನ್ನಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಸೋಮೇಶ್ವರ ಕಡೆಯಿಂದ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಚಾಲಕ ಮತ್ತು ಪಕ್ಕದಲ್ಲಿದ್ದ ಮತ್ತೊಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ.
ಮರ ಬಿದ್ದ ತಕ್ಷಣ ಗಾಬರಿಯಾದ ಚಾಲಕ ವಾಹನ ಬಿಟ್ಟು ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಮರ ಬಿದ್ದ ಕಾರಣ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ನಂತರ ಅರಣ್ಯಾಧಿಕಾರಿಗಳು, ಪೊಲೀಸರು ಬಂದು ಮರವನ್ನು ತೆರವುಗೊಳಿಸಿದ್ದಾರೆ. ಕಳೆದ ತಿಂಗಳ ಗುಡ್ಡ ಕುಸಿತವಾದ ಕಾರಣ ಆಗುಂಬೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್