Headlines

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬ್ಯಾಂಕ್ ಉದ್ಯೋಗಿ ಸಾವು

ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತವಾಗಿ ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಬ್ಯಾಕೋಡು ಗ್ರಾಮದಲ್ಲಿ ನಡೆದಿದೆ.



ಬ್ಯಾಕೋಡು ಸಮೀಪದ ಸುಳ್ಳಳ್ಳಿ ಕಾರ್ಪೋರೇಶನ್ ಬ್ಯಾಂಕಿನಲ್ಲಿ ಉದ್ಯೋಗಿಯಾಗಿದ್ದ ಕಿಶನ್ (34) ಮೃತಪಟ್ಟ ದುರ್ಧೈವಿಯಾಗಿದ್ದಾರೆ.



ಸಾಗರದಿಂದ ಸುಳ್ಳಳ್ಳಿ ಬ್ಯಾಂಕ್ ಗೆ ತೆರಳುವಾಗ ಈ ಅಪಘಾತ ಬ್ಯಾಕೋಡು ಸಮೀಪ ಸಂಭವಿಸಿದೆ.



ಅಪಘಾತದ ಸಂದರ್ಭದಲ್ಲಿ ಕಿಶನ್ ಗೆ ತೀವ್ರ ರಕ್ತಸ್ರಾವವಾಗಿದ್ದು ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.


ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *