ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ.
ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ.
ಎಲ್ಲಾರು ಒಂದೇ ಕುಟುಂಬದವರಾಗಿದ್ದು ಜೋಗ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಇಕೋ ಕಾರಿನ ಚಾಲಕ ಶಾಬಾಜ್(23) ಸ್ಥಳದಲ್ಲಿಯೇ ಮೃತಪಟ್ಟಿದ್ದು,ಕಾರಿನಲ್ಲಿ ಪ್ರಯಾಣಿಸುತಿದ್ದ ತಬಸ್ಸಮ್(35) ರಿಹಾನ್ (13) ಶಿಫಾ(27) ಖಮರುನ್ನಿಸಾ(45) ಜಬ್ರೂನ್(55)ಮಹಮ್ಮದ್ ಉಸ್ಮಾನ್(25)ಎಂಬುವವರ ಸ್ಥಿತಿ ಗಂಭೀರವಾಗಿದೆ ಹೆಚ್ಚಿನ ಚಿಕಿತ್ಸೆಗೆ ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್