ಕೋಡೂರು : ಇಲ್ಲಿನ ಸಮೀಪದ ಕೇಶವಪುರ ಗ್ರಾಮದಲ್ಲಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತಿದ್ದ ಕಾರು ಮತ್ತು 60ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಕೇಶವಪುರ ಗ್ರಾಮದ ಶೇಕ್ ಫೈಝರ್ ಮಸೂದ್ ಗೆ ಸೇರಿದ ಕಾರಿನ ಮೇಲೆ ದಾಳಿ ಮಾಡಿ ಕಾರಿನಲ್ಲಿ ಸಾಗಣಿಕೆ ಮಾಡಲು ಹೊಂದಿದ್ದ 60 ಗ್ರಾಂ ಒಣ ಗಾಂಜಾ ಸೊಪ್ಪುನ್ನು ಮತ್ತು ಒಂದು ಕಾರನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ಧ ಅಬಕಾರಿ ನಿರೀಕ್ಷಕರು ಹೊಸನಗರ ವಲಯ ರವರು NDPS ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ.
ಈ ದಾಳಿಯಲ್ಲಿ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಲ್ಲಿ ಹಾಗೂ ಅಬಕಾರಿ ಉಪ ಅಧಿಕ್ಷಕರು ತೀರ್ಥಹಳ್ಳಿ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ಹೊಸನಗರ ವಲಯದ ಅಬಕಾರಿ ನೀರಿಕ್ಷಕರಾದ ಶ್ರೀ ನಾಗರಾಜ ಎ ಜೆ, ಕೆಂಪರಾಮು. ಅಬಕಾರಿ ಮುಖ್ಯ ಪೇದೆ, ಪಾಂಡು ಅಂಬವ್ವಗೊಳ್ ಅಬಕಾರಿ ಪೇದೆ ಹಾಗೂ ವಾಹನ ಚಾಲಕ ಉಮೇಶ್ ಎಸ್ ಡಿ ರವರು ಭಾಗವಹಿಸಿರುತ್ತಾರೆ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್