ಶಿರಾಳಕೊಪ್ಪ : ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.
ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕ್ರೀಡಾಂಗಣದಿಂದ ಹೊರ ಬಂದ ಒಂದು ಕೋಮಿನ ಯುವಕರ ಗುಂಪು ಮತ್ತೊಂದು ಕೋಮಿನ ಗುಂಪಿನ ಯುವಕನ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.
ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದು, ಗಸ್ತು ಆರಂಭಿಸಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.