ತೀರ್ಥಹಳ್ಳಿ: ದೇಶಾದ್ಯಂತ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶದ ಹಬ್ಬವಾಗಿ ಆಚರಿಸುತ್ತಿದ್ದು ಇಂದಿನಿಂದ ಆಗಸ್ಟ್ ಹದಿನೈದರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ.ದೇಶಪ್ರೇಮಿಗಳು ತ್ರಿವರ್ಣ ಧ್ವಜಕ್ಕೆ ಪೂಜೆ ನೆರವೇರಿಸಿ ಮನೆಯ ಮುಂಭಾಗ ಹಾಗೂ ಮನೆಯ ಮೇಲೆ ಬಾವುಟವನ್ನು ಹಾರಿಸಿ ನಮಸ್ಕರಿಸುತ್ತಿದ್ದಾರೆ.
ಆದರೆ ಕೆಲವು ಸರ್ಕಾರಿ ಅಧಿಕಾರಿಗಳು ತ್ರಿವರ್ಣಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರಾ ಎಂಬ ಪ್ರೆಶ್ನೆ ಮೂಡುತ್ತಿದೆ.
ಕಾರಣ ತೀರ್ಥಹಳ್ಳಿ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೆರವೇರಿಸಿದ ಧ್ವಜಾರೋಹಣದಲ್ಲಿ ಎಡವಟ್ಟು ಎದ್ದು ಕಾಣಿಸುತ್ತಿದ್ದು ಎಲ್ಲಾ ಕಡೆ ಟ್ರೊಲ್ ಆಗುತ್ತಿದೆ.
ರಾಜ್ಯ ಸರ್ಕಾರದ ಗೃಹ ಸಚಿವರ ಸ್ವಕ್ಷೇತ್ರ ತೀರ್ಥಹಳ್ಳಿಯ ಶಿಕ್ಷಣ ಇಲಾಖೆಯಲ್ಲಿ ತಮ್ಮ ಕಚೇರಿಯಲ್ಲಿ ಕಬ್ಬಿಣದ ಸಲಾಕೆ ಒಂದಕ್ಕೆ ತ್ರಿವರ್ಣ ಧ್ವಜವನ್ನು ಕಟ್ಟಿದ್ದಲ್ಲದೆ ವ್ಯಕ್ತಿಯ ಎದೆ ಭಾಗಕ್ಕಿಂತ ಎತ್ತರಕ್ಕೆ ಧ್ವಜಾರೋಹಣವನ್ನು ನೆರವೇರಿಸಬೇಕಾಗಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು
ವ್ಯಕ್ತಿಯ ಎದೆಯ ಭಾಗಕ್ಕಿಂತಲೂ ಕೇಳಭಾಗದಲ್ಲಿ ಧ್ವಜಾರೋಹಣ ಮಾಡಿ
ರಾಷ್ಟ್ರಧ್ವಜಕ್ಕೆ ಅಪಮಾನ ಎಸಗಿದ್ದಾರೆ.
ತೀರ್ಥಹಳ್ಳಿ ಶಿಕ್ಷಣಾಧಿಕಾರಿ ಆನಂದ್ ಕುಮಾರ್ ಈ ಸಾಮಾನ್ಯ ಜ್ಞಾನವೂ ಇಲ್ಲದೆ ಬೇಕಾಬಿಟ್ಟಿ ಧ್ವಜಾರೋಹಣ ನೆರವೇರಿಸಿದ್ದು ಜಿಲ್ಲಾಧಿಕಾರಿಗಳು ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್