POSTMAN NEWS

ನೈಜ ಸುದ್ದಿ ನೇರ ಬಿತ್ತರ..

ತೀರ್ಥಹಳ್ಳಿ ಸಮೀಪ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಕಟ್ಟೆಹಕ್ಲು ಶಾಲೆ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ತಾಲ್ಲೂಕಿನ ಕಟ್ಟೆಹಕ್ಲು ಸಮೀಪ ನಾಗರವಳ್ಳಿ ಗ್ರಾಮದ ಬಳಿ ಮಾರುತಿ ಓಮಿನಿ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.


ಮೃತಪಟ್ಟ ವ್ಯಕ್ತಿಯನ್ನು ಕಟ್ಟೆಹಕ್ಲು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್ ಎಂದು ಗುರುತಿಸಲಾಗಿದೆ.


ವೆಂಕಟೇಶ್ ರವರು ಬೈಕ್​ನಲ್ಲಿ ಬರುತ್ತಿದ್ದಾಗ ನಾಗರವಳ್ಳಿ ತಿರುವಿನಲ್ಲಿ ಮಾರುತಿ ಒಮಿನಿಗೆ ಗುದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ವೆಂಕಟೇಶ್​ರವರು ಸಾವನ್ನಪ್ಪಿದ್ದಾರೆ.


ಶಾಲೆಯ ಕೆಲಸದ ನಿಮಿತ್ತ ಬೈಕ್ ನಲ್ಲಿ ತೆರಳುತಿದ್ದಾಗ ತಿರುವಿನಲ್ಲಿ ವೇಗವಾಗಿ ಬರುತಿದ್ದ ಮಾರುತಿ ಒಮಿನಿಗೆ ಬೈಕ್​ ಡಿಕ್ಕಿಯಾಗಿದೆ. 


ಇನ್ನೂ ಮೂಲತಃ ಕೊಪ್ಪ ತಾಲ್ಲೂಕಿನ ಬೊಮ್ಲಾಪುರದವರಾದ ವೆಂಕಟೇಶ್​ ಈ ವರ್ಷ ಪ್ರಮೋಶನ್​ ಪಡೆದು ಮುಖ್ಯೋಪಾಧ್ಯಾಯರಾಗಿ ಆಗಿ ಕಟ್ಲೆ ಹಕ್ಲು ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು.


ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.