Headlines

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು.



ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು.


ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು.



ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಡೆ ಯವರನ್ನು ಭೇಟಿಯಾದ ಶಾಸಕ ಹರತಾಳು ಹಾಲಪ್ಪ


ಶ್ರಾವಣ ಮಾಸದ ಪ್ರಯುಕ್ತ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ಶಾಸಕ ಹರತಾಳು ಹಾಲಪ್ಪ ಇತ್ತೀಚೆಗೆ ನೂತನವಾಗಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಡೆ ಯವರನ್ನು ಭೇಟಿಯಾಗಿ ಅಭಿನಂದಿಸಿ, ಆಶೀರ್ವಾದ ಪಡೆದರು.


ಈ ಸಂಧರ್ಭದಲ್ಲಿ ಶಾಸಕರ ಕುಟುಂಬಸ್ಥರು, ಸಾಗರ-ಹೊಸನಗರ ತಾಲೂಕಿನ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

Exit mobile version