ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು ದಾಖಲಾಗಿದೆ.
ಸಂತಾಪ :
ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಹಿರಿಯಣ್ಣ ರವರ ಕುಟುಂಬಕ್ಕೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ.