ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ
ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್ಗೆ ಗುದ್ದಿದ ಪರಿಣಾಮ ಬೈಕ್ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ.
ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ ಪಡೆದಿದ್ಧಾರೆ.
ಇನ್ನೂ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರ ಘಟನೆಯ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ಈ ಅಪಘಾತದ ಸಿಸಿಟಿವಿ ವೀಡಿಯೋವನ್ನು ಇಲ್ಲಿ ವೀಕ್ಷಿಸಿ