ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ : ಶಾಸಕ ಹರತಾಳು ಹಾಲಪ್ಪ ಸಂತಸ

ರಿಪ್ಪನ್‌ಪೇಟೆ : ರಾಜ್ಯದ ಬಹು ಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇದ ಕಾಯ್ದೆಯ 2011 ರ ಕಾಲಂ 2(ಡಿ ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹೆಚ್ ಹಾಲಪ್ಪ ಹರತಾಳು ಹೇಳಿದರು.
ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸಚಿವ ಸಂಪುಟದ ಪರಿಷತ್  ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. 192ಎ ಕಾಲಂ ಸ್ಥಗಿತಗೊಳಿಸಿರುವಂಥದ್ದು ಬಹಳ ಖುಷಿಯ ವಿಚಾರ. ಕಾರಣ ಒಂದು ಗುಂಟೆ ಸೈಟು ಮಾಡಿಕೊಡವರನ್ನು ಕೇಸ್ ಹಾಕುವ ಮೂಲಕ ಅವರನ್ನು ಬೆಂಗಳೂರಿಗೆ ಅಲೆಸುವಂತಹ ಕೆಲಸ ಮಾಡುತ್ತಿದ್ದರು. ಇದು ಒಂದು ರೀತಿ ಬಡವರಿಗೆ ಯಮಪಾಷವಾಗಿತ್ತು. ಈಗ ಇದನ್ನು ರದ್ದುಗೊಳಿಸಿರುವುದರಿಂದ ಸಾವಿರಾರು ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ ಎಂದರು.

ಸರ್ಕಾರಿ ಜಾಗವನ್ನು ಕಬಳಿಸುವವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದ್ದು ಇದಕ್ಕೆ ರಾಜ್ಯ ಸರ್ಕಾರ ಕರ್ನಾಟಕ ಭೂ ಕಬಳಿಕೆ ಕಾಯ್ದೆ 2011 ರ ಅಡಿಗೆ ತಿದ್ದುಪಡಿ ತರಲು ನಿರ್ಧರಿಸಲಾಗಿ ಈ ಮೂಲಕ ಬಹುದಿನಗಳ ಜನತೆಯ ಬೇಡಿಕೆಯೊಂದಿಗೆ ಶಾಸನ ಸಭೆಯಲ್ಲಿ ಶಾಸಕನಾಗಿ ಮತ್ತು ರಾಜ್ಯದ ಗೃಹ ಸಚಿವ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಹೇಳಿ ಮುಖ್ಯಮಂತ್ರಿಗಳನ್ನು ಮತ್ತು ಸುಂಪುಟ ಕೈಗೊಂಡ ನಿರ್ಧಾರವನ್ನು ಅಭಿನಂದಿಸಿದರು.

ಮುಂದೆ ಶರಾವತಿ ಮತ್ತು ಅರಣ್ಯ ಹಕ್ಕು ಕಾಯಿದೆ ಬಗ್ಗೆ ಕಾರ್ಯಗತಗೊಳಿಸುವ ಪ್ರಯತ್ನದಲ್ಲಿದ್ದೇವೆ.ಅದು ಈಡೇರುವ ಭರವಸೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕ್ ಅಧ್ಯಕ್ಷ ಗಣಪತಿ ಬಿಳಗೋಡು, ಮಹಾಶಕ್ತಿ ಕೇಂದ್ರದ ಅದ್ಯಕ್ಷ ಎಂ.ಬಿ.ಮಂಜುನಾಥ, ಜಿ.ಪಂ. ಮಾಜಿ ಸದಸ್ಯೆ ಎ.ಟಿ.ನಾಗರತ್ನ, ಎನ್.ಸತೀಶ್, ಉದ್ಯಮಿ ನಾಗರಾಜಶೆಟ್ಟಿ, ಕೆ.ಬಿ.ಹೂವಪ್ಪ, ಎಂ.ಸುರೇಶ್ ಸಿಂಗ್, ಗ್ರಾ.ಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಮಹಾಲಕ್ಷ್ಮಿ
ಸುಧೀಂದ್ರ ಪೂಜಾರಿ, ಯೋಗೇಂದ್ರಗೌಡ, ಸುಂದರೇಶ್, ಸುಧೀರ್, ಪಿ.ರಮೇಶ್, ಪುಟ್ಟ ಹಾಲುಗುಡ್ಡೆ,‌ ನಾಗಾರ್ಜುನಸ್ವಾಮಿ ಇನ್ನಿತರ ಮುಖಂಡರು ಹಾಜರಿದ್ದರು.


ಮನೆ ಕಳೆದುಕೊಡ ನಿರ್ಗತಿಕ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ



ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾದ್ಲಾರದಿಂಬ ಚಂದ್ರಪ್ಪಗೌಡ ಎಂಬುವವರ ಮನೆ ಕುಸಿದು ಸಂಪೂರ್ಣ ನೆಲಸಮಗೊಂಡಿದ್ದು ನಿರ್ಗತಿಕ ಕುಟುಂಬಕ್ಕೆ ತಕ್ಷಣ ಪರಿಹಾರವಾಗಿ ಸರ್ಕಾರ ನೀಡುವ ಚೆಕ್ಅನ್ನು ಕ್ಷೇತ್ರ ಶಾಸಕ ಹರತಾಳು ಹಾಲಪ್ಪ ಇಂದು ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕ ಪರಿಹಾರದ ಚೆಕ್ ವಿತರಿಸಿ ಕುಟುಂಬದವರಿಗೆ ಧೈರ್ಯ ತುಂಬಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಸಂಪೂರ್ಣ ಮನೆ ಹಾನಿಗೀಡಾದರೆ 5 ಲಕ್ಷ ರೂ. ಪರಿಹಾರ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಹಂತಹಂತವಾಗಿ ಮನೆ ನಿರ್ಮಣಕ್ಕೆ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾವಾಗುತ್ತದೆ ಎಂದು ಹೇಳಿ ಸುಸಜ್ಜಿತ ಮನೆ ನಿರ್ಮಿಸಿಕೊಳ್ಳುವಂತೆ ಕುಟುಂಬದವರಿಗೆ ಸೂಚಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

2 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

4 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

4 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

4 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

14 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

1 day ago