ಹೊಸನಗರ : ಯಕ್ಷಗಾನ ಕಲೆಗೆ ಸಾವಿರಾರು ವರ್ಷಗಳ ಇತಿಹಾಸ ವಿದೆ.ಕಲಾವಿದರು ತಮ್ಮ ಪ್ರತಿಭೆ ಯನ್ನು ಯಾವುದೇ ತಯಾರಿ ಇಲ್ಲದೆ ಕ್ಷಣ ಕ್ಷಣಕ್ಕೂ ಪ್ರದರ್ಶನ ನೀಡಿ..ಭಾಗವತರ ಪದ್ಯಕ್ಕೆ ಹೆಜ್ಜೆ ಹಾಕಿ ಅರ್ಥ ಹೇಳುವ ಸ್ಪಷ್ಟ ಕನ್ನಡ ಉಚ್ಚಾರಣೆ ಮಾಡುವ ಕಲೆ…ಸಾಂಪ್ರದಾಯಿಕ, ಸಾಂಸ್ಕೃತಿಕ, ಕಲೆ ಯಕ್ಷಗಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ರ್ಮೋಚಾ ಕಾರ್ಯದರ್ಶಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶ್ವೇತ ಶ್ರೀಧರ್ ಹೇಳಿದರು.
ಶುಕ್ರವಾರ ಬೆಂಗಳೂರು ರವಿಂದ್ರ ಕಲಾ ಕ್ಷೇತ್ರದಲ್ಲಿ ಯಕ್ಷ ಮಿತ್ರ ಬಳಗ ಬೆಂಗಳೂರು ಹಾಗೂ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಡಿಯಲ್ಲಿ
ಆಯೋಜಿಸಿದ್ದ ಚಂದ್ರಮುಖಿ ಯಕ್ಷಗಾನ ದ 200ನೇ ಪ್ರದರ್ಶನ ದ ಸಭಾ ಕಾರ್ಯಕ್ರಮ ದಲ್ಲಿ “ಸಮಾಜ ಸೇವಾ ರತ್ನ” ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ಕೊರೋನಾ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ರು ಸೇರಿದಂತೆ ಜಾನಪದ ಕಲಾವಿದರು ಸಂಕಷ್ಟದ ಕಣ್ಣಿರು ಸುರಿಸಿದ್ದಾರೆ.ಅರ್ಥಿಕ ಹೊಡೆತ ಅನುಭವಿಸಿದ್ದಾರೆ.ಕಲಾವಿದರು ತಮ್ಮ ನೋವುಗಳನ್ನು ಹೃದಯದಲ್ಲಿ ಬಚ್ಚಿಟ್ಟುಕೊಂಡು ರಂಗಸ್ಥಳದಲ್ಲಿ ರಾಜರಂತೆ ಪ್ರದರ್ಶನ ನೀಡಿ ಕತೆಗೆ ಜೀವ ತುಂಬುತ್ತಾರೆ.ಕಲಾವಿದರನ್ನು ಬೆಳೆಸುವ ಕಾರ್ಯ ಎಲ್ಲರ ಕರ್ತವ್ಯ ವಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಂತರ ವಿಧಾನ ಸಭಾ ಕಾಂಗ್ರೆಸ್ ಅಭ್ಯರ್ಥಿ ಪಲ್ಲವಿ ಜಿ,ರಾಜ್ಯ ಡಿ ದರ್ಜೆ ನೌಕರರ ಸಂಘದ ಅಧ್ಯಕ್ಷರಾದ ನಾಗೇಂದ್ರ ಗೌಡ, ಅಂತರರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು, ನಾಡಿ ತಜ್ಣ ಡಾ.ಸಚಿನ್ ಝಾಡಬೂಕಿ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಮುಕ್ತಿ ವಾಹನ ದಾನಿ ರಿಪ್ಪನ್ ಪೇಟೆ ಕೆ.ಚಂದ್ರಶೇಖರ್, ಜಿಲ್ಲಾ ದೈವಜ್ಣಾ ಮಹಿಳಾ ಮುಖಂಡೆ ರೇವತಿ ಸತ್ತೀಶ್,ಹಿರಿಯ ಯಕ್ಷಗಾನ ಕಲಾವಿದ ಬಲ್ಕೂರು ಕೃಷ್ಣ ಯಾಜಿ, ಸಾಲಿಗ್ರಾಮ ಮೇಳದ ಮುಖ್ಯ ಭಾಗವತ್ ರಾಮಕೃಷ್ಣ ಹಿಲ್ಲೂರು ಉಪಸ್ಥಿತರಿದ್ದರು.
ಪ್ರಸಂಗ ಕರ್ತ ದೇವದಾಸ್ ಈಶ್ವರ ಮಂಗಲ ಸ್ವಾಗತಿಸಿ,ಜೀ ಟಿವಿ ಪ್ರಣವ್ ಕಾರ್ಯಕ್ರಮ ನಿರೂಪಿಸಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್