ರಾಜಕಾರಣಿಗಳ ನಡವಳಿಕೆ ಜನರಲ್ಲಿ ಅಸಹ್ಯವುಂಟುಮಾಡಿದೆ,ಅದು ಪರಿವರ್ತನೆಯಾಗಬೇಕು: ಕೆ ದಿವಾಕರ್

ರಿಪ್ಪನ್‌ಪೇಟೆ: ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷದ ಸಾಗರ ವಿಧಾನಸಭಾ ಕ್ಷೇತ್ರ ಸಂಭಾವ್ಯ ಅಭ್ಯರ್ಥಿ ಕೆ. ದಿವಾಕರ್ ಹೇಳಿದರು.

ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್‌ಆದ್ಮಿ ಪಕ್ಷದ ನೂತನ ಕಛೇರಿ ಉದ್ಘಾಟನೆಯ ನಂತರ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಇದುವರೆಗೆ ನಮ್ಮನ್ನಾಳಿದ ಶಾಸಕರುಗಳು ಉಂಡುಹೋದ ಕೊಂಡುಹೋದ ಮನಸ್ಥಿತಿಯವರಾಗಿರುವುದು ದುರಂತ. ನಮ್ಮಿಂದ ಆಯ್ಕೆಯಾದ ಕಳ್ಳರು, ಕಾಕರು, ದರೋಡೆ ಕೋರರು ಸಮಾಜವನ್ನು ಏನು ಮಾಡುತ್ತಿದ್ದಾರೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ರಕ್ಷಣಾ ವ್ಯವಸ್ಥೆ ಹಾಳಾದರೆ ದೇಶವೇ ಹಾಳಾಗುತ್ತದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ದುರ್ಬಲಗೊಳಿಸಿದ ಕೀರ್ತಿ ಗೃಹಮಂತ್ರಿ ಆರಗ ಜ್ಞಾನೇಂದ್ರಗೆ ಸಲ್ಲ್ಲುತ್ತದೆ. ಪ್ರಾಮಾಣೀಕತೆ ಬಾಯಿಗೆ ಮಾತ್ರ ಸೀಮಿತವಾಗಿರಬಾರದು ಆಚರದಲ್ಲೂ ಇರಬೇಕು. ಬೆಂಗಳೂರಿನ ಪ್ರತಿಷ್ಠಿತವಲಯದಲ್ಲಿ ನಿವೇಶನ ಹೊಂದಲು ಗೃಹ ಮಂತ್ರಿ ಹಗರಣ ಮಾಡಿರುವುದು ತಿಳಿದುಬಂದಿದೆ. ಗೋಪಾಲಗೌಡರ ಕ್ಷೇತ್ರದ ಪ್ರತಿನಿಧಿ ನಾನು ಎಂಬ ಅಭಿಮಾನ ಇದ್ದರೆ ನೈತಿಕತೆಯ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ನರೇಂದ್ರ ಮೋದಿ ಮತ್ತು ಅಮಿತ್ ಷಾರವರು ಪ್ರಜಾಪ್ರಭುತ್ವದ ಹತ್ಯೆಗೆ ಬಂದಿರುವ ಮಾನವ ಬಾಂಬುಗಳು. ಈ ಸರ್ಕಾರ ಇಟ್ಟುಕೊಂಡು ಸಮಾಜದ ಸುಧಾರಣೆ ಸಾಧ್ಯವಿಲ್ಲ. ಕಳಂಕರಹಿತರಾದ ಕಾರ್ಯಕರ್ತರು ಯಾರಿಗೂ ಹೆದರುವ ಅಗತ್ಯವಿಲ್ಲ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಯಕತ್ವದಲ್ಲಿ ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಮುನ್ನುಗ್ಗಿ. ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಜನರು ಮೂರು ಪಕ್ಷಗಳಿಂದ ಭ್ರಮನಿರಸನಗೊಂಡಿದ್ದಾರೆ. ಆಮ್‌ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದರು.

ಕಛೇರಿ ಉದ್ಘಾಟಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಖ್ಯಾತ ಹಾಸ್ಯ ಚಿತ್ರನಟ ಟೆನಿಸ್ ಕೃಷ್ಣ ಮಾತನಾಡಿ ರಾಜ್ಯದಲ್ಲಿ ಬದಲಾವಣೆ ತರುವ ಸದಾಶಯದಿಂದ ಎಎಪಿ ಸೇರಿದ್ದೇನೆ. ಮೂರು ಪಕ್ಷಗಳು ರಾಜ್ಯವನ್ನು ಲೂಟಿಮಾಡುತ್ತಿದ್ದಾರೆ. ಇನ್ನುಮುಂದೆ ನಾವು ಅವಕಾಶಕೊಡುವುದಿಲ್ಲ. ಕೇಜ್ರಿವಾಲ್‌ರವರು ನಮ್ಮ ಕೈಗೆ ಪೊರಕೆಕೊಟ್ಟಿದ್ದಾರೆ ಎಲ್ಲಾ ಕಸವನ್ನು ಗುಡಿಸಿ ಹಾಕುತ್ತೇವೆ ಎಂದರು.

ಈ ಸಂದರ್ಭದಲ್ಲಿ ನವಿಲೇಶ್, ಅಮೃತ್‌ರಾಸ್, ಗಣೇಶ್, ಶಿವಕುಮಾರ, ತನಿಕಲ್ ಮದನ್, ಸಂತೋಷ ಆಶ್ರಿತ, ಈಶ್ವರಪ್ಪ ಕುಕ್ಕಳಲೆ, ಹಸನಬ್ಬ, ಹನೀಫ್, ರವಿ ಇನ್ನಿತರರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

9 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

9 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

9 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

14 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

16 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago