ರಿಪ್ಪನ್‌ಪೇಟೆಯಲ್ಲಿ ವಿಜ್ರಂಭಣೆಯಿಂದ ಜರುಗಿದ 75ನೇ ಸ್ವಾತಂತ್ರ ಅಮೃತ ಮಹೋತ್ಸವ :

ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.

ಆಗಸ್ಟ್ ೧೩ ರಿಂದ ಹರ್‌ಗರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಂಡ ಜನತೆ ೧೫ ರ ಸೋಮವಾರ ಅಧಿಕೃತ ಧ್ವಜಸ್ತಂಭಗಳಲ್ಲಿ ಧ್ವಜಾರೋಹಣ ನೇರವೇರಿಸುವುದರೊಂದಿಗೆ ರಾಷ್ಟ ಗೌರವ ಸಲ್ಲಿಸಿದರು.

ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ,ವೊ ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ,  ಬ್ಯಾಂಕ್‌ಗಳು, ಅರಣ್ಯ ಇಲಾಖೆ,ಮೊಹಿಯುದ್ದೀನ್ ಜುಮ್ಮಾ ಮಸೀದಿ,ಗುಡ್ ಶೆಫರ್ಡ್ ಚರ್ಚ್ ಇನ್ನಿತರೆಡೆಗಳಲ್ಲಿ, ಆಡಳಿತ, ಇಲಾಖೆಯ ಸಿಬ್ಬಂದಿಗಳು ಧ್ವಜಾರೋಹಣ ನೆರವೇರಿಸಿದರು. ನಂತರ ಎಲ್ಲಾ ಶಾಲಾ-ಕಾಲೇಜು ಸಾವಿರಾರು ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭಾರತಮಾತೆಯ ಭಾವಚಿತ್ರದೊಂದಿಗೆ ಪಥಸಂಚಲನ ನಡೆಸಿ, ದೇಶಾಭಿಮಾನದ ಘೋಷಣೆಗಳನ್ನು ಕೂಗುತ್ತ ಸಂಭ್ರಮಿಸಿದರು.

ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದ ಕಾರ್ಯಕ್ರಮದ ವೀಡಿಯೋ ಇಲ್ಲಿ ವೀಕ್ಷಿಸಿ👇

ಚಿನ್ನ್ನೆಗೌಡ ಕ್ರೀಡಾಂಗಣದಲ್ಲಿ ಸಮಾವೇಶಗೊಂಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳ‌ ಕೇತಾರ್ಜಿರಾವ್ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದೊಂದಿಗೆ ಸಾರ್ವಜನಿಕ ಕಾರ್ಯಕ್ರಮ ಗ್ರಾಮಾಡಳಿತದಿಂದ ಆಯೋಜಿಸಲಾಗಿತ್ತು. ಸ್ವಾತಂತ್ರ್ಯ ಮಹತ್ವದ ಬಗ್ಗೆ ಗಜಾನನ ಭಟ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ನಡೆದ ಸ್ವಾತಂತ್ರ್ಯ ಅಮೃತಮಹೋತ್ಸವ ವೀಡಿಯೋ ಇಲ್ಲಿ ವೀಕ್ಷಿಸಿ👇

ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳ, ಉಪಾಧ್ಯಕೆ ಮಹಾಲಕ್ಷಿ,ಗ್ರಾಪಂ ಸದಸ್ಯರುಗಳು,ಸಿಡಿಸಿ ಸದಸ್ಯರುಗಳು, ಪ್ರಾಂಶುಪಾಲರಾದ ಚಂದ್ರಶೇಖರ್, ಮಂಜುನಾಥ, ಉಪಪ್ರಾಂಶುಪಾಲ ಕೆಸುವಿನಮನೆ ರತ್ನಾಕರ, ಉಪತಹಶೀಲ್ದಾರ್ ಹುಚ್ಚರಾಯಪ್ಪ, ಪಿಡಿಓ ಚಂದ್ರಶೇಖರ, ಪಿಎಸ್‌ಐ ಶಿವಾನಂದ ಕೋಳಿ, ಇನ್ನಿತರರು ಉಪಸ್ಥಿತರಿದ್ದರು.
 
ಅದ್ದೂರಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ವಿದ್ಯಾರ್ಥಿಗಳ ಮೆರವಣಿಗೆ ವೀಡಿಯೋ ಇಲ್ಲಿ ವೀಕ್ಷಿಸಿ👇


ರಕ್ತದಾನ ಶಿಬಿರ: 



ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರೋಟರಿ ಸಂಸ್ಥೆವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

Leave a Reply

Your email address will not be published. Required fields are marked *