ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.
ಆಗಸ್ಟ್ ೧೩ ರಿಂದ ಹರ್‌ಗರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಂಡ ಜನತೆ ೧೫ ರ ಸೋಮವಾರ ಅಧಿಕೃತ ಧ್ವಜಸ್ತಂಭಗಳಲ್ಲಿ ಧ್ವಜಾರೋಹಣ ನೇರವೇರಿಸುವುದರೊಂದಿಗೆ ರಾಷ್ಟ ಗೌರವ ಸಲ್ಲಿಸಿದರು.
ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್ ಠಾಣೆ,ವೊ ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ, ಬ್ಯಾಂಕ್‌ಗಳು, ಅರಣ್ಯ ಇಲಾಖೆ,ಮೊಹಿಯುದ್ದೀನ್ ಜುಮ್ಮಾ ಮಸೀದಿ,ಗುಡ್ ಶೆಫರ್ಡ್ ಚರ್ಚ್ ಇನ್ನಿತರೆಡೆಗಳಲ್ಲಿ, ಆಡಳಿತ, ಇಲಾಖೆಯ ಸಿಬ್ಬಂದಿಗಳು ಧ್ವಜಾರೋಹಣ ನೆರವೇರಿಸಿದರು. ನಂತರ ಎಲ್ಲಾ ಶಾಲಾ-ಕಾಲೇಜು ಸಾವಿರಾರು ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭಾರತಮಾತೆಯ ಭಾವಚಿತ್ರದೊಂದಿಗೆ ಪಥಸಂಚಲನ ನಡೆಸಿ, ದೇಶಾಭಿಮಾನದ ಘೋಷಣೆಗಳನ್ನು ಕೂಗುತ್ತ ಸಂಭ್ರಮಿಸಿದರು.
ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದ ಕಾರ್ಯಕ್ರಮದ ವೀಡಿಯೋ ಇಲ್ಲಿ ವೀಕ್ಷಿಸಿ👇
ಚಿನ್ನ್ನೆಗೌಡ ಕ್ರೀಡಾಂಗಣದಲ್ಲಿ ಸಮಾವೇಶಗೊಂಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದೊಂದಿಗೆ ಸಾರ್ವಜನಿಕ ಕಾರ್ಯಕ್ರಮ ಗ್ರಾಮಾಡಳಿತದಿಂದ ಆಯೋಜಿಸಲಾಗಿತ್ತು. ಸ್ವಾತಂತ್ರ್ಯ ಮಹತ್ವದ ಬಗ್ಗೆ ಗಜಾನನ ಭಟ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ನಡೆದ ಸ್ವಾತಂತ್ರ್ಯ ಅಮೃತಮಹೋತ್ಸವ ವೀಡಿಯೋ ಇಲ್ಲಿ ವೀಕ್ಷಿಸಿ👇
ಅದ್ದೂರಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ವಿದ್ಯಾರ್ಥಿಗಳ ಮೆರವಣಿಗೆ ವೀಡಿಯೋ ಇಲ್ಲಿ ವೀಕ್ಷಿಸಿ👇
ರಕ್ತದಾನ ಶಿಬಿರ:
ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರೋಟರಿ ಸಂಸ್ಥೆವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್