ರಿಪ್ಪನ್‌ಪೇಟೆ : ಕಂದಾಯ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ರೈತ ಕುಟುಂಬದಿಂದ ಧರಣಿ

ರಿಪ್ಪನ್‌ಪೇಟೆ: ಕೆಂಚನಾಲ ಗ್ರಾಮದ ಸ್ವಂತ ಜಮೀನಿಗೆ ದಾರಿ ಕಲ್ಪಿಸಲು ನಿರ್ಲಕ್ಷ್ಯ ವಹಿಸಿರುವ ಕಂದಾಯ ಇಲಾಖೆಯ ಧೋರಣೆಯನ್ನು ಖಂಡಿಸಿ ರೈತ ಸೋಮಶೇಖರ ಮತ್ತು ಅವರ ಕುಟುಂಬ ಸದಸ್ಯರು ನಾಡಕಛೇರಿ ಎದುರು ಶುಕ್ರವಾರ  ಪ್ರತಿಭಟನಾ ಧರಣಿ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ರೈತ ಸೋಮಶೇಖರ ಮಾದ್ಯಮದವರೊಂದಿಗೆ ಮಾತನಾಡಿ ಕೆಂಚನಾಲ ಗ್ರಾ,ಮದ ಸರ್ವೆ ನಂ. ೩೫ ರಲ್ಲಿ ೨ ಎಕರೆ ಜಮೀನನ್ನು ಹೊಂದಿರುವ ನಾನು ಸಾಗುವಳಿಯ ಜೊತೆಗೆ ರಬ್ಬರ್ ಮರಗಳನ್ನು ನೆಟ್ಟು ಕೃಷಿ ಚಟುವಟಿಕೆಯಲ್ಲಿ ತೊಡಗಿರುತ್ತೇನೆ. ಅಕ್ಕಪಕ್ಕದ ಬಗರ್ ಹುಕುಂ ಮಂಜೂರಾತಿ ಪಡೆದ ರೈತರು ನನ್ನ ಜಮೀನಿಗೆ ಹೋಗಲು ಇದ್ದ ದಾರಿಯಲ್ಲಿ ಅಕ್ರಮ ಬೇಲಿ ನಿರ್ಮಿಸಿ ಸಂಚಾರಕ್ಕೆ ತಡೆಯೊಡ್ಡಿದ್ದಾರೆ. ಕಳೆದ ಐದು ವರ್ಷಗಳ ಹಿಂದೆ ಈ ಘಟನೆ ನಡೆದಿದ್ದು, ಅಂದಿನಿಂದ ಇಂದಿನವರೆಗೆ ನನಗೆ ಓಡಾಡಲು ದಾರಿ ಇಲ್ಲದ ಕಾರಣ ನನ್ನ ಸ್ವಂತ ಜಮೀನನ್ನು ಹಾಳು ಬಿಟ್ಟಿರುತ್ತೇನೆ. ೨೦೧೭ ರಲ್ಲಿ ಬೇಲಿ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದೇನೆ.

 ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ತಹಶೀಲ್ದಾರ್‌ರರು ಸಿಬ್ಬಂದಿಗಳೊದಿಗೆ ಸ್ಥಳಕ್ಕಾಗಮಿಸಿ ರಸ್ತೆಯ ಎರಡೂ ಬದಿಯಲ್ಲಿ ಕಂದಕ ನಿರ್ಮಾಣಮಾಡಿ ರಸ್ತೆ ಬಿಡಿಸಿದ್ದರು. ಆದರೆ ಒಂದೇ ದಿನದ ಅಂತರದಲ್ಲಿ ಪುನಃ ಓಡಾಡುವ ರಸ್ತೆಗೆ ಬೇಲಿ ನಿರ್ಮಿಸಿದ್ದಾರೆ. ಅಕ್ರಮ ಬೇಲಿ ನಿರ್ಮಿಸಿರುವವರ ವಿರುದ್ಧ ಕ್ರಮಕೈಗೊಂಡು ದಾರಿ ಬಿಡಿಸಿಕೊಡುವಂತೆ ಹಲವು ಬಾರಿ ಇಲಾಖೆಗೆ ಮನವಿ ಮಾಡಿದ್ದೇನೆ. ಆದರೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಹೋಗುವುದು ಬಿಟ್ಟರೆ ನನಗೆ ಕಳೆದ ೫ ವರ್ಷಗಳಿಂದಲೂ ನ್ಯಾಯ ಕೊಟ್ಟಿಲ್ಲ. ಜೀವನೋಪಾಯಕ್ಕಿದ್ದ ಭೂಮಿಯಲ್ಲಿ ಕೃಷಿಯನ್ನು ಮಾಡದೆ ಇಡೀ ಕುಟುಂಬ ಬೀದಿಗೆ ಬಿದ್ದಿದ್ದೇವೆ. ಕುಟುಂಬದ ಜೀವನ ನಿರ್ವಹಣೆಗಾಗಿ ಕೂಲಿ ಮಾಡುತ್ತಿದ್ದು ಹೆಂಡತಿಯ ಅನಾರೋಗ್ಯದ ಚಿಕಿತ್ಸೆಗಾಗಿ ಚಿಕ್ಕ ಮಗನೂ ಕೂಡ ಶಾಲೆಯ ಓದನ್ನು ತೊರೆದು ಕೂಲಿಮಾಡುವಂತಾಗಿದೆ.

 ಕಛೇರಿಗಳಿಗೆ ಹಲವು ವರ್ಷಗಳಿಂದ  ಅಲೆದು  ನನ್ನ ಕೈಯಲ್ಲಿ ಬಿಡಿಗಾಸು ಇಲ್ಲದಂತಾಗಿದೆ. ಆರ್ಥಿಕ ಮತ್ತು ದೈಹಿಕವಾಗಿ ಅಶಕ್ತನಾದ ನನಗೆ ಧರಣಿ ಹೊರತುಪಡಿಸಿದರೆ ಅನ್ಯಮಾರ್ಗವಿಲ್ಲ. ನಾನು ಉಳುಮೆ ಮಾಡಲು ದಾರಿಯನ್ನು ಬಿಸಿಕೊಡುವವರೆಗೂ ಇಲ್ಲಿಯೇ ಹೋರಾಟ ನಡೆಸುತ್ತೇನೆಂದು ದುಃಖದಿಂದ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದನು.


ಅಹವಾಲನ್ನು ಆಲಿಸಿದ ಉಪತಹಶೀಲ್ದಾರ್ ಹುಚ್ಚರಾಯಪ್ಪ ದಾರಿ ಸಮಸ್ಯೆಗೆ ಸಂಬಂಧಿಸಿದಂತೆ ಸಂಬಂಧಿತರಿಗೆ ಈಗಾಗಲೇ ತಿಳುವಳಿಕೆ ನೋಟೀಸ್ ನೀಡಲಾಗಿದೆ. ಧರಣಿಯ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೂ ತರಲಾಗಿದೆ. ತಹಸೀಲ್ದಾರ್‌ರರ ನಿರ್ದೇಶನದಂತೆ ಬಗರ್ ಹುಕುಂ ಮಂಜೂರಾತಿ ಆದೇಶದ ನಿಯಮ ಉಲ್ಲಂಘನೆಯ ೧೦೮/ಎ ಪ್ರಕಾರ ಮಂಜೂರಾತಿ ರದ್ದು ಪಡಿಸುವ ಕ್ರಮಕೈಗೊಳ್ಳುವಂತೆ ತಹಸೀಲ್ದಾರ್‌ರರ ಮೂಲಕ ಉಪವಿಭಾಗಾಧಿಕಾರಿಗಳಿಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಿ, ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತಕುಟುಂಬ ತಾತ್ಕಾಲಿಕವಾಗಿ ಧರಣಿ ಹಿಂಪಡೆದರು.

ಪ್ರತಿಭಟನೆಯಲ್ಲಿ ರೈತ ಸೋಮಶೇಖರ, ಪತ್ನಿ ಚಂದ್ರಕಲಾ, ಮಕ್ಕಳಾದ ಅನುಪ, ಅಲೋಕ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

1 hour ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

1 hour ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

4 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

5 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

9 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

9 hours ago