ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ ಬಲವಾಗಿ ಗುದ್ದಿದ ಪರಿಣಾಮ ಶ್ರೀನಿವಾಸ್ ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು ದಾಖಲಾಗಿದೆ.