Headlines

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ.

ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್‌ ಮಾಲೀಕರಿಗೆ ನೋಟೀಸ್‌ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿ 19 ಪ್ರಕರಣ ದಾಖಲಿಸಿ 5900 ರೂ. ದಂಡ ವಸೂಲಿ ಮಾಡಲಾಗಿದೆ.

ಈ ದಾಳಿಯಲ್ಲಿ ಶಿವಮೊಗ್ಗ ಜಿಲ್ಲಾ ತಂಬಾಕು‌ನಿಯಂತ್ರಣ ಕೋಶದ
ರವಿರಾಜ್ ಜಿ ಕೆ,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಕರಿಬಸಮ್ಮ,ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಎ ಎಸ್ ಐ ಹಾಲಪ್ಪ , 
ಅಮೃತೇಶ್, ಗಾಯತ್ರಿ, ರಾಘವೇಂದ್ರ, ಪ್ರವೀಣ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *