ರಿಪ್ಪನ್ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ.
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿ 19 ಪ್ರಕರಣ ದಾಖಲಿಸಿ 5900 ರೂ. ದಂಡ ವಸೂಲಿ ಮಾಡಲಾಗಿದೆ.
ಈ ದಾಳಿಯಲ್ಲಿ ಶಿವಮೊಗ್ಗ ಜಿಲ್ಲಾ ತಂಬಾಕುನಿಯಂತ್ರಣ ಕೋಶದ
ರವಿರಾಜ್ ಜಿ ಕೆ,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಕರಿಬಸಮ್ಮ,ರಿಪ್ಪನ್ಪೇಟೆ ಪೊಲೀಸ್ ಠಾಣೆ ಎ ಎಸ್ ಐ ಹಾಲಪ್ಪ ,
ಅಮೃತೇಶ್, ಗಾಯತ್ರಿ, ರಾಘವೇಂದ್ರ, ಪ್ರವೀಣ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಭಾಗಿಯಾಗಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್