w
Headlines
Home » ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ‌ ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ‌ ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಎಂ ಬಿ ಲಕ್ಷಣ ಗೌಡರವರ ಮನೆ ಮುಂದಿನ ಬೃಹತ್ ಮರ ಭಾರಿ‌ ಮಳೆ ಗಾಳಿಗೆ ರಸ್ತೆಗೆ ಅಡ್ಡಲಾಗಿ ನೆಲಕ್ಕುರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ.


ಭಾರಿ ಗಾಳಿ ಮಳೆಗೆ ಬೃಹತ್ ಮರ ನೆಲಕ್ಕುರುಳಿದ ಪರಿಣಾಮ ಹಲವಾರು ಲೈಟ್ ಕಂಬಗಳು ತುಂಡಾಗಿದ್ದು ಹಲವಾರು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

ಮರ ನೆಲಕ್ಕುರುಳಿದ ವಿಷಯ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸ್ ಇಲಾಖೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದಲ್ಲಿ ಭಾರಿ ಮಳೆಯಲ್ಲಿಯೂ ಕಾರ್ಯಪ್ರವೃತ್ತರಾಗಿ ವಿನಾಯಕ ಸರ್ಕಲ್ ಹಾಗೂ ಬರುವೆ ನಿಲ್ದಾಣದಲ್ಲಿ ಬ್ಯಾರಿಕೇಡ್ ಅಳವಡಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಮಾಹಿತಿ ನೀಡುತಿದ್ದಾರೆ.

ಸಂಬಂಧಪಟ್ಟ ಇಲಾಖೆಯವರು ಕೂಡಲೇ ಕಾರ್ಯಪ್ರವೃತ್ತರಾಗಿ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.