ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಿದ ಶಾಲಾ ಯುವ ಸಂಸತ್ ಚುನಾವಣೆ

ರಿಪ್ಪನ್ ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಯುವ ಸಂಸತ್ ಚುನಾವಣೆಯನ್ನು ವಿಭಿನ್ನವಾಗಿ ರಿಪ್ಪನ್ ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.


ಮತದಾನಕ್ಕೆ ಸರ್ಕಾರ ಹದಿನೆಂಟು ವಯೋಮಿತಿ ನಿಗದಿ ಪಡಿಸಿದೆ ಆದರೆ ಮೊದಲ ಮತದಾನ ಮಾಡುವಾಗ ಯುವ ಮತದಾರರಲ್ಲಿ ಆತಂಕ ದುಗುಡ ಎದ್ದುಕಾಣುತ್ತದೆ ಕೆಲವರು ಅಂಜಿಕೆಯಿಂದಲೇ ಮತದಾನದಿಂದ ಹಿಂದೆ ಜರುಗುವುದು ಹೆಚ್ಚು ಇದನ್ನು ಗಮನದಲ್ಲಿಟ್ಟುಕೊಂಡು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿದೆಸೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ತರಗತಿ ನಾಯಕನನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ವಿಶೇಷವಾಗಿ ಚಾಲನೆ ನೀಡಿದ್ದಾರೆ 


ಇಲ್ಲಿ  ಚುನಾವಣಾ ಆಯೋಗದ ನಿಯಮದಂತೆ ಮತದಾನ ನಡೆಯಿತು. ನಾಮಪತ್ರ ಸಲ್ಲಿಕೆ, ಹಿಂಪಡೆಯುವಿಕೆ ದಿನಾಂಕ, ಹಾಗೂ ಚಿಹ್ನೆ ವಿತರಣೆ, ಬ್ಯಾಲೆಟ್ ಮಾದರಿ, ಮುದ್ರೆ, ಬೆರಳು ಶಾಹಿ, ಗುರುತು ಪತ್ರ ಎಲ್ಲವೂ ನಿಯಮದಂತೆ ಮಾಡಲಾಯ್ತು ಇಲ್ಲಿ ಚುನಾವಣಾ ಅಧಿಕಾರಿ ಹಾಗೂ ಚುನಾವಣಾ ಸಿಬ್ಬಂದಿಗಳ ಕಾರ್ಯವನ್ನು ವಿದ್ಯಾರ್ಥಿಗಳೇ  ನಿರ್ವಹಿಸಿದ್ದರು,ಅಲ್ಲದೆ ಮತಪೆಟ್ಟಿಗೆಯ ಸಹ ಬಳಕೆಗೆ ಮಾಡಲಾಗಿತ್ತು  ಅಭ್ಯರ್ಥಿಗಳ ಪರ ಚುನಾವಣಾ ಏಜೆಂಟರ ನೇಮಕ ಮಾಡಲಾಗಿತ್ತು.


ಈ ಕುರಿತು ಪೋಸ್ಟ್ ಮ್ಯಾನ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಹ ಶಿಕ್ಷಕ ಹಾಗೂ ಯುವ ಸಂಸತ್ ಚುನಾವಣಾ ನೋಡಲ್ ಅಧಿಕಾರಿ ಕೆ ಚಂದ್ರಪ್ಪ ಪ್ರತಿ ತರಗತಿಯಲ್ಲಿ ಕನ್ನಡ ಜನ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವದ ಮಾದರಿಯಂತೆ ಸಭಾಪತಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕರು ಹಾಗೂ ಮಂತ್ರಿ ಮಂಡಲದ ರಚನೆ ನಡೆಯಲಿದೆ.


ಇಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ತಾಲ್ಲೂಕು ಜಿಲ್ಲಾ ಹಾಗೂ ರಾಜ್ಯ ಮಟ್ಟದವರೆಗೂ ತಮ್ಮ ಕಾರ್ಯಕ್ಷೇತ್ರದ ಅರಿವು ಮೂಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ,ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ವಿಧಾನಸಭಾ ಕಲಾಪವು ನೇರವಾಗಿ ವೀಕ್ಷಣೆ ಮಾಡುವ ಅವಕಾಶವಿದೆ ಜನಪ್ರತಿನಿಧಿಗಳ ಪಾತ್ರ ಅವರನ್ನು ನಾಯಕನನ್ನಾಗಿ ಬೆಳೆಸುವ ಗುಣ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ ಎಂದರು.


ಎಲ್ಲಾ ಮಕ್ಕಳು ಪ್ರಚಾರದಲ್ಲಿ ಭಾಗಿಯಾಗಿದ್ದು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿರುವುದು ಗುರುತಿನ ಚೀಟಿ ಹಿಡಿದು ಮತದಾನಕ್ಕೆ ಪಾಲ್ಗೊಂಡಿರುವುದು ವಿಶೇಷವಾಗಿ ಕಂಡಿದ್ದಂತೂ ನಿಜ……


ಶಾಲಾ ಯುವ ಸಂಸತ್ ಚುನಾವಣೆಯ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

3 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

4 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago