ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ.
ಆಯನೂರಿನಿಂದ ರಿಪ್ಪನ್‌ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ.
ನಡೆದಿದ್ದೇನು….
ರಿಪ್ಪನ್‌ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಲಾರಿ (KL-11 BO 5728) ಸಿದ್ದಪ್ಪನಗುಡಿ ಬಳಿ ಶಿವಮೊಗ್ಗಕ್ಕೆ ತೆರಳುತಿದ್ದ ಕೆ ಎಸ್ ಆರ್ ಟಿಸಿ (KA 07 F 1795) ಬಸ್ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿದ್ದ ಲಾರಿ ಕೆ ಎಸ್ ಆರ್ ಟಿಸಿ ಬಸ್ ಗೆ ಹಿಂಬದಿಗೆ ತಾಗಿಸಿ ಏಕಾಏಕಿ ಬಲಕ್ಕೆ ತೆಗೆದುಕೊಂಡಿದ್ದಾನೆ ಈ ಸಂಧರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಇರ್ವರು ಲಾರಿ ಅಡಿ ಸಿಲುಕಿಕೊಂಡಿದ್ದು ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಯಿತು.
ಅದೃಷ್ಟವಶಾತ್ ಬೈಕ್ ನಲ್ಲಿದ್ದ ಇಬ್ಬರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಗಾಯಾಳುಗಳನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇