ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಸಾವಿರ ಧ್ವಜಗಳನ್ನು ಪೂರೈಸಲಾಗುತ್ತದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ 70 ಸಾವಿರ ಧ್ವಜ ಹಾರಾಟದ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು.
ಹೊಸನಗರ ತಾಲೂಕು ತಹಸಿಲ್ದಾರ್ ವಿ ರಾಜೀವ್ ಮಾತನಾಡಿ ಆ.13ರ ಬೆಳಿಗ್ಗೆ 6 ಗಂಟೆಯಿಂದ ಆ. 15ರ ಸಂಜೆ 6ರವರೆಗೆ ನಿರಂತರವಾಗಿ ರಾಷ್ಟ್ರಧ್ವಜ ಹಾರಿಸಲು ಅವಕಾಶ ನೀಡಲಾಗಿದ್ದು, ಮನೆ ಅಥವಾ ಕಟ್ಟಡ ಮೇಲ್ಬಾಗದಲ್ಲಿ ಕಟ್ಟಬೇಕು. ಆ. 15ರ ನಂತರ ರಾಷ್ಟ್ರಧ್ವಜವನ್ನು ಇಳಿಸಿ ಸುರಕ್ಷಿತವಾಗಿಡಬೇಕು ಎಂದರು.ಎಲ್ಲಾ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ . ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಚಂದ್ರಶೇಖರ. ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಎ. ಮಂಜುನಾಥ್ ಹಾಗೂ ಮುಖಂಡರಾದ ಎಂ ಬಿ ಮಂಜುನಾಥ್,ವೀರೇಶ್ ಆಲುವಳ್ಳಿ,ಆನಂದ್ ಮೆಣಸೆ,ಸುರೇಶ್ ಸಿಂಗ್, ಹಾಗೂ ವಿದ್ಯಾರ್ಥಿಗಳು ಇದ್ದರು.
