ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ನಾಳೆ ಎಲ್ಲೆಡೆ ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲು ಅದ್ದೂರಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಹಿನ್ನೆಲೆ ಇಂದಿನಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಿದ್ದತೆ ಮಾಡಿಕೊಂಡಿದ್ದು, ನಾಳೆ ಪಟ್ಟಣದ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಯಿಂದ 11:30ರ ತನಕ ಮುತ್ತೈದೆಯರಿಗೆ ಅರಿಶಿನ – ಕುಂಕುಮ ನೀಡಲಾಗುವುದು.
ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಲಕ್ಷ್ಮೀ ಪೂಜೆ ಮಾಡಿ ಮನೆಗೆ ಲಕ್ಷ್ಮೀಯನ್ನು ಕೂರಿಸಿ ಆರಾಧನೆ ಮಾಡಲಾಗುತ್ತೆ. ಈ ವರಮಹಾಲಕ್ಷ್ಮೀ ಹಬ್ಬ ಮಹಿಳೆಯರ ಅಚ್ಚುಮೆಚ್ಚಿನ ಹಬ್ಬ. ಅದೇ ರೀತಿ ನಾಳೆ ಎಲ್ಲೆಡೆ ವರ ಮಹಾಲಕ್ಷ್ಮಿ ಹಬ್ಬವನ್ನು ತಮ್ಮ ಮನೆಗಳಲ್ಲಿ ಆಚರಣೆ ಮಾಡುತ್ತಾರೆ.
ಈ ಹಿನ್ನೆಲೆ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ಮುಂಜಾನೆಯಿಂದಲೇ ಹಬ್ಬದ ಖರೀದಿಯಲ್ಲಿ ಜನರು ತೊಡಗಿದ್ರು. ಹೂವು ಹಣ್ಣಿನ ಬೆಲೆ ದುಬಾರಿಯಾದ್ರೂ ಹಬ್ಬ ಮಾಡ್ಬೇಕು ಅಂತ ಜನರು ಸಾಮಾಗ್ರಿಗಳನ್ನು ಖರೀದಿ ಮಾಡಿ ಹಬ್ಬಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್