ಶಿವಮೊಗ್ಗ : ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ.
ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು 06-08-2022 ರ ಬೆಳಿಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟ 1801.35 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 30,000 ಕ್ಯೂಸೆಕ್ಸ್‍ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಟ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ.
ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಆದ್ದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್