ಶಿವಮೊಗ್ಗ: ಸಿಟಿ ಸೆಂಟ್ರಲ್ ಮಾಲ್ : ನಿನ್ನೆ ಮಾಲ್ನಲ್ಲಿ ವೀರ ಸಾರ್ವಕರ್ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು.
ಘಟನೆ ಸಂಬಂಧ ಕೇಸ್ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು.
ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ ಪ್ರತಿಭಟನೆ ನಡೆದಿದ್ದರಿಂದ, ಗೊಂದಲ ಸನ್ನಿವೇಶ ಎದುರಾಗಿತ್ತು. ಬಳಿಕ ವಿಚಾರಣೆಗೆ ಕರೆತಂದಿದ್ದವರಿಂದಲೇ ಪ್ರತಿಭಟನಾಕಾರರನ್ನು ಮನವೊಲಿಸಿ ವಾಪಸ್ ಕಳುಹಿಸಲಾಯ್ತು.
 
                         
                         
                         
                         
                         
                         
                         
                         
                         
                        