ಶಿವಮೊಗ್ಗದ ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಸ್ತೂರ್ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್ ಸಿಂಗ್, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್ ನ ತರಕಾರಿ ಮಾರುಕಟ್ಟೆಯ ಹತ್ತಿರ ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು.
ಪ್ರೇಮ್ ಸಿಂಗ್ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್ ಲೇಟ್ ನೌಶಾದ್ ಅಲಿ, 25 ವರ್ಷ ಮತ್ತು 2) ಅಬ್ದುಲ್ ರೆಹಮಾನ್ ಬಿನ್ ಅಬ್ದುಲ್ ಲತೀಫ್, 25 ವರ್ಷ, ಇವರುಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.
ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು :
ಎನ್ ಟಿ ರಸ್ತೆಯ ಫಲಕ್ ಪ್ಯಾಲಸ್ ಬಳಿ ಚರ್ಬಿ ಯಾನೆ ಮೊಹ್ಮದ್ ಜಬಿ ನ ಕಾಲಿಗೆ ಗುಂಡೇಟು ಹೊಡೆಯಲಾಗಿದೆ.
ನಿನ್ನೆ ಬಜಾರ್ ನ ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾರ್ನಮಿಬೈಲು ನಿವಾಸಿ ಚರ್ಬಿ(30)ಯನ್ನ ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾಗಿದ್ದಾನೆ.ಚರ್ಬಿ ದಾಳಿ ನಡೆಸಿ ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ಎಡಗಾಲಿಗೆ ಗುಂಡು ಹಾರಿಸಲಾಗಿದೆ.
ಮೆಗ್ಗಾನ್ ಜೈಲ್ ವಾರ್ಡ್ ನಲ್ಲಿ ಮೊಹಮ್ಮದ್ ಜಬೀ ನನ್ನು ತಂದಿರಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್