ರಿಪ್ಪನ್ಪೇಟೆ : ವೀರಶೈವ ಧರ್ಮ ಸರ್ವರನ್ನು ಪ್ರೀತಿಸುವ ಧರ್ಮವಾಗಿದೆಯೆಂದು ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.
ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾ, ಪೂಜಾರಗೊಪ್ಪ- ಮಸರೂರಿನಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಭಕ್ತ ಮಂಡಳಿ ಹಮ್ಮಿಕೊಂಡಿದ್ದ ಇಷ್ಟ ಲಿಂಗ ಪೂಜೆ ನೆರವೇರಿಸಿ ನುಡಿದರು. ಶ್ರೀ ಜಗದ್ಗುರು ರೇಣುಕ ಭಗವತ್ಪಾದರು ಸಿದ್ಧಾಂತ ಶಿಖಾಮಣಿಯಲ್ಲಿ ಸರ್ವ ಧರ್ಮದವರಿಗೂ ಅನ್ವಯವಾಗುವ ದಶಧರ್ಮ ಸೂತ್ರಗಳನ್ನು ಬೋಧಿಸಿದ್ದಾರೆ. ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚರ್ಯ. ದಯ, ಕ್ಷಮ, ಜಪ, ಪೂಜೆ, ದ್ಯಾನ, ದಾನ, ಹೀಗೆ ಭೋಧಿಸಿದ್ದಾರೆಂದರು. ಶ್ರೀಗುರು ಕರುಣಿಸಿದ ಇಷ್ಟ ಲಿಂಗದ ಮಹತ್ವವೂ ಅತೀ ಅಗತ್ಯವಾಗಿದೆ. ಅನಿಷ್ಟವನ್ನು ಕಳೆದು ಇಷ್ಟಾರ್ಥವನ್ನು ಪೂರೈಸುವ ಶಕ್ತಿ ಇಷ್ಟಲಿಂಗದಲ್ಲಿ ಇದೆ. ಆದರೆ ಅದು ನಿಷ್ಠೆಯಿಂದ ಪೂಜೆ ಮಾಡಿದಾಗ ಮಾತ್ರ ಸಾಧ್ಯ ಎಂದರು.
ಈ ಪವಿತ್ರ ಪೂಜಾ ಸಮಾರಂಭದಲ್ಲಿ ಅರ್ಚಕರಾದ ಶಿವಾನಂದಪ್ಪ, ರಾಚಪ್ಪ, ಹಿರಿಯರಾದ ಬೆಳಂದೂರಿನ ತಾತೇಶ್ವರಪ್ಪಗೌಡು, ಕಗ್ಗಲಿಯ ಪುಟ್ಟಸ್ವಾಮಿಗೌಡ್ರು, ಜಗದೀಶ್ಗೌಡರು, ಮಸರೂರಿನ ಮುರುಗೇಶಪ್ಪ ಗೌಡ್ರು, ಮತ್ತು ಕುಟುಂಬದವರು ಹಾಗು ಭಕ್ತಾದಿಗಳು ಭಾಗವಹಿಸಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್