ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ  ಲಾರಿ ಹಾಗೂ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
 ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ  ಬುಲೆಟ್ ಬೈಕ್ ಹಾಗೂ ಪಲ್ಸರ್ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ.
 ಸ್ಥಳದಲ್ಲೇ ಪಡವಗೂಡು  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗಕ್ಕೆ ಕರೆದೊಯ್ಯಲಾಗುತ್ತಿದೆ.
ಸ್ಥಳದಲ್ಲಿ ಸಾಗರ ಗ್ರಾಮಾಂತರ ಪೊಲೀಸರು ಹಾಜರಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.



