ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ.
ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಇರುವ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಫೋಟೋ ಇಡಲು ಯುವಕರು ಮುಂದಾಗಿದ್ದರು. ವಿಚಾರ ತಿಳಿದ ಪೊಲೀಸರು ಸಾವರ್ಕರ್ ಫೋಟೋ ತೆರವು ಮಾಡಿದ್ದರು. ಜೊತೆಗೆ ಟಿಪ್ಪು ಫೋಟೊ ಇಡಲು ನಿರಾಕರಿಸಿದ್ದರು.
ಇದೇ ವಿಚಾರಕ್ಕೆ ಜಟಾಪಟಿ ಆರಂಭವಾಗಿದ್ದು, ಸಾವರ್ಕರ್ ಫೋಟೋ ತೆರವು ಮಾಡಿರುವುದಕ್ಕೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮತ್ತೊಂದು ಕೋಮಿನ ಯುವಕರು ಪ್ರತಿಭಟನೆ ನಡೆಯುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ್ದು, ಪೊಲೀಸರನ್ನೂ ಲೆಕ್ಕಿಸದೇ ಸಾವರ್ಕರ್ ಫ್ಲೆಕ್ಸ್ ಕಿತ್ತೊಗೆಯಲು ಮುಂದಾಗಿದ್ದಾರೆ.
ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸದ್ಯ ಶಿವಮೊಗ್ಗ ನಗರದಲ್ಲಿ ಎರಡು ದಿನ ಸೆಕ್ಷನ್ ಜಾರಿಗೊಳಿಸಲಾಗಿದೆ.
ನಮಸ್ಕಾರ, ನಾನು ರಫಿ ರಿಪ್ಪನ್ಪೇಟೆ.
'ಪೋಸ್ಟ್ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್ಮ್ಯಾನ್ ನ್ಯೂಸ್.
ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್ಮ್ಯಾನ್ ನ್ಯೂಸ್.”
ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ."
ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ.
'ಪೋಸ್ಟ್ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ.
ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು."
ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ.
ಸ್ನೇಹಪೂರ್ವಕವಾಗಿ,
ರಫಿ ರಿಪ್ಪನ್ಪೇಟೆ
ಸಂಪಾದಕರು, ಪೋಸ್ಟ್ಮ್ಯಾನ್ ನ್ಯೂಸ್
🌐 [www.postmannewskannada.com]
Leave a Reply