ಸೂಡೂರು : ಶಿವಮೊಗ್ಗ-ಹೊಸನಗರ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರತಿ ನಿತ್ಯ ಒಂದೆರಡು ಅಪಘಾತಗಳು ನಡೆಯುತಿದ್ದು ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ಎಂದು ಒತ್ತಾಯಿಸಿ ಕೂರಂಬಳ್ಳಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದರು.
ಐದನೇ ಮೈಲಿಕಲ್ಲು ಹಾಗೂ ಚಿನ್ನಮನೆ ಗ್ರಾಮದ ನಡುವಿನ ರಸ್ತೆಯಲ್ಲಿ ಹಲವಾರು ಗುಂಡಿಗಳು ಬಿದ್ದಿದ್ದು ಹಲವಾರು ಅಪಘಾತಗಳು ನಡೆದಿದ್ದವು ಈ ಹಿನ್ನಲೆಯಲ್ಲಿ ಕೂರಂಬಳ್ಳಿ ಗ್ರಾಮಸ್ಥರು ಇಂದು ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ವಿನೂತನವಾಗಿ ಪ್ರತಿಭಟಿಸಿದರು.
ಹಲವಾರು ಸಮಯದಿಂದ ಯಾವುದೇ ರಸ್ತೆಗಳಿಗೆ ಹೊಸದಾಗಿ ಡಾಂಬರೀಕರಣ ಮಾಡಲು ಸಾಧ್ಯವಾಗಿಲ್ಲ. ಕನಿಷ್ಠ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಲಾಗುತ್ತಿಲ್ಲ.ಗ್ರಾಮದ ಅಭಿವೃದ್ಧಿ ಕಾರ್ಯ ಮಾಡುವಲ್ಲಿ ಶಾಸಕರು ಮತ್ತು ಅಧಿಕಾರಿಗಳು ವಿಫಲರಾಗುತ್ತಿದ್ದಾರೆ’ ಎಂದು ಗ್ರಾಮಸ್ಥರು ಆರೋಪಿಸಿದರು.
ಮುಖ್ಯರಸ್ತೆ ತುಂಬ ಹೊಂಡಗಳಿಂದ ತುಂಬಿವೆ. ನಿತ್ಯ ಪ್ರವಾಸಿಗರು, ಸ್ಥಳೀಯರು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರೀಕರಣ ಮಾಡಲು ಸಾಧ್ಯವಾಗದೆ ಇರುವುದು ವಿಷಾದನೀಯ’ ಗ್ರಾಮಸ್ಥ ಶುಭೋದಯ್ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರತಿಭಟನೆಯಲ್ಲಿ ರವೀಂದ್ರ,ಜವುಳಿ ಸತ್ಯನಾರಾಯಣ್,ಕುಮಾರ್ ,ಸಂತೋಷ್,ಜಗದೀಶ್ ,ಸುಜಿತ್, ದಿಲೀಪ್ ,ಪ್ರಜ್ವಲ್ ,ಪವನ್ ,ರಾಘು ,ಗಿರೀಶ್ ಹಾಗೂ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್