ಹುಂಚದಕಟ್ಟೆಯಲ್ಲಿ ಹಳ್ಳಿ ಭೇಟಿ ಮತ್ತು ಗ್ರಾಮ ವಾಸ್ತವ್ಯ : ಅಕ್ರಮ ಮದ್ಯ ಮಾರಾಟದ ವಿರುದ್ದ ಸಿಡಿದೆದ್ದ ಮಹಿಳೆಯರು,ತಬ್ಬಿಬ್ಬಾದ ಅಬಕಾರಿ ಅಧಿಕಾರಿ

ಮನೆ-ಮನೆಗಳಲ್ಲಿ ಆಕ್ರಮ ಮಧ್ಯ ಮಾರಾಟ ಮಾಡಲಾಗುತ್ತಿದ್ದು ಯುವಜನಾಂಗ ಮತ್ತು ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ.ಶಾಲಾ ಅವರಣದ ತುಂಬ ಮಧ್ಯದ ಬಾಟಲ್ ಮತ್ತು ಪೌಚು ಪ್ಯಾಕೇಟ್‌ಗಳ ರಾಶಿಯೇ ಬಿದ್ದಿರುತ್ತದೆ ಶಾಲೆ ಅರಂಭಕ್ಕೂ ಮುನ್ನ ಮಕ್ಕಳಿದ ಅದನ್ನು ಅರಿಸುವುದೇ ಕೆಲಸವಾಗಿದೆ.ಈ ಬಗ್ಗೆ ಗ್ರಾಮ ಸಭೆ ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ  ಅಬಕಾರಿ ಅಧಿಕಾರಿಗಳು ಅಂಗಡಿ ಮನೆಗಳ ಬಳಿ ಬಂದು ಹಪ್ತಾ ವಸೂಲಿ ಮಾಡಿಕೊಂಡು ಹೋಗುತ್ತಾರೆಯೇ ಹೊರತು ಮಧ್ಯಮಾರಾಟ ತಡೆಯುತ್ತಿಲ್ಲ ಎಂದು ಅಬಕಾರಿ ಅಧಿಕಾರಿಗಳ ಕಾರ್ಯವೈಖರಿಗೆ ಮಹಿಳೆಯರು ಗರಂ ಅಗುವ ಮೂಲಕ ತಮ್ಮ ಆಕ್ರೋಶವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ವ್ಯಕ್ತಪಡಿಸಿದಾಗ ಅಬಕಾರಿ ಅಧಿಕಾರಿಗಳು ಕೆಲಕಾಲ ತಬ್ಬಿಬ್ಬಾದ ಘಟನೆ ಸಮೀಪದ ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಗ್ರಾಮದಲ್ಲಿ  ಇಂದು ನಡೆದಿದೆ.

ರಾಜ್ಯ ಸರ್ಕಾರದ ಆದೇಶದಂತೆ ಹಳ್ಳಿ ಬೇಟಿ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮದಂತೆ ಇಂದು ತೀರ್ಥಹಳ್ಳಿ ತಾಲ್ಲೂಕಿನ ವ್ಯಾಪ್ತಿಯ ಹುಂಚದಕಟ್ಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ತಹಶೀಲ್ದಾರ್ ಅಮೃತ ಅತ್ರೇಶ್ ಅಧ್ಯಕ್ಷತೆಯಲ್ಲಿ ನಡೆದ ಹಳ್ಳಿ ಭೇಟಿ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮಸ್ಥರ ಅಹವಾಲುಗಳ ಸ್ವೀಕಾರ ಕಾರ್ಯಕ್ರಮದಲ್ಲಿ  ಹಲವಾರು ಮಹಿಳೆಯರು ಏಕಾಕಾಲದಲ್ಲಿ ಅಬಕಾರಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಳ್ಳುವ ಮೂಲಕ ಹಣ್ಣುಗಾಯಿ ನೀರುಗಾಯಿಯನ್ನಾಗಿಸಿದರು.



ತಾವು ಎಷ್ಟು ಕೇಸ್ ದಾಖಲಿಸಿದ್ದೀರಿ ಮನೆಮನೆಯಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರು ನೀಡಿದರೆ ತಾವು ಬಂದು ಮಧ್ಯಮಾರಾಟವನ್ನು ತಡೆಯದೆ ಅವರು ಕೊಡುವ ಹಪ್ತಾ ವಸೂಲಿ ಮಾಡಿಕೊಂಡು ಹೋಗುತ್ತೀರಾ ಈಗ ನಮಗೆ ಸ್ಪಷ್ಟ ಉತ್ತರ ಕೊಡಿ ಎಂದು ಪಟ್ಟು ಹಿಡಿದರು.ಆಗ ಉತ್ತರಿಸಲು ತಡವರಿಸಿದ ಅಬಕಾರಿ ಅಧಿಕಾರಿಯನ್ನು ಗಮನಿಸಿದ ತಹಶೀಲ್ದಾರ್ ಕೊಡಲೇ ಮಧ್ಯ ಪ್ರವೇಶಿಸಿ ಇನೊಂದು ವಾರದೊಳಗೆ ಗ್ರಾಮದಲ್ಲಿ ಅಕ್ರಮ ಮಧ್ಯಮಾರಾಟವನ್ನು ಬಂದ್ ಮಾಡುವುದಾಗಿ ಭರವಸೆ ನೀಡಿ ಮಹಿಳೆಯರನ್ನು ಸಮದಾನಿಸುವ ನಿಟ್ಟನಲ್ಲಿ ಹರಸಾಹಸ ಪಡುವಂತಾಯಿತು.


ರಾಜ್ಯ ಹೆದ್ದಾರಿ ಅಂಚಿನಲ್ಲಿ ಕೆಲವು ಸಾಲುಮರಗಳು ಒಣಗಿ ಅಪಾಯದ ಸ್ಥಿತಿಯಲ್ಲಿವೆ ಅದನ್ನು ಕಡಿತಲೆ ಮಾಡಿ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾದರೂ ನಿರ್ಲಕ್ಷö್ಯ ವಹಿಸಿದ್ದಾರೆಂದು


ಗ್ರಾಮಸ್ಥರು ಪ್ರಶ್ನಿಸಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಅರ್ಜಿ ಕೊಡಿ ಪರಿಶೀಲಿಸಿ ಹಿರಿಯ ಅಧಿಕಾರಿಗಳ ಅನುಮತಿ ಪಡೆದು ಕಡಿತಲೆ ಮಾಡುವುದಾಗಿ ಹೇಳಿದಾಗ ಅಕ್ರೋಶಗೊಂಡ ಸಾರ್ವಜನಿಕರು ಅರಣ್ಯದಲ್ಲಿ ಅಕ್ರಮ ಮರಕಡಿತಲೆ ಮಾಡಿಕೊಂಡು ಹೋದರೆ ಏನು ಮಾಡದ ನೀವು ಅದೇ ಯಾರು ರೈತ ತನ್ನ ಮನೆ ಬಳಕೆಗೆಂದು ಮರಕಡಿದರೆ ಮನೆಗೆ ನುಗ್ಗುತೀರಾ ಅಗ ಹಿರಿಯ ಅಧಿಕಾರಿಗಳ ಅನುಮತಿ ಬೇಡಾವಾ ಎಂದು ತರಾಟೆಗೆ ತೆಗೆದುಕೊಂಡರು.


ಈಗಾಗಲೇ ಹುಂಚದ ಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಹಿಂದು ರುದ್ರಭೂಮಿಗೆ ಜಾಗ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲಾಗಿ ಒಂದು ಗ್ರಾಮಕ್ಕೆ ಜಾಗ ಮಂಜೂರು ಮಾಡಿದ್ದೀರಾ ಉಳಿದ ನಾಲ್ಕು ಗ್ರಾಮಗಳ ರುದ್ರಭುಮಿಗೆ ಜಾಗ ಮಂಜೂರು ಮಾಡದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ತಹಶೀಲ್ದಾರ್ ಉತ್ತರಿಸಿ ಅತಿ ಶೀಘ್ರದಲ್ಲಿ ಜಾಗ ಮಂಜೂರು ಮಾಡಲಾಗುವುದೆಂದರು.

ಅಲ್ಲದೆ ಅರಣ್ಯ ಇಲಾಖೆಯವರು ತಮ್ಮ ಗಡಿ ಜಾಗದಲ್ಲಿ ಚರಂಡಿ ತಗೆಯಲಾಗಿದ್ದು ಸರಿಯಾಗಿ ಕೆಳಭಾಗಕ್ಕೆ ನೀರು ಹರಿದುಹೋಗದೆ ಮನೆಗಳಿಗೆ ನುಗ್ಗುವಂತಾಗಿದೆ ಈ ಬಗ್ಗೆ ಕ್ರಮ ಕೈಗೊಂಡು ನ್ಯಾಯಕೊಡಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದರು ಅಗ ತಕ್ಷಣ ಪರಿಹರಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.



ಇನ್ನೂ ಮಲೆನಾಡಿನ ಪ್ರದೇಶವಾಗಿರುವ ತೀರ್ಥಹಳ್ಳಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬಗರ್‌ಹುಕುಂ ಅರಣ್ಯ ಜಮೀನು ಮತ್ತು ಗೋಮಾಳ ಹುಲ್ಲುಬನ್ನಿ ಸೇರಿದಂತೆ ಜಾನುವಾರುಗಳಿಗೆ ಮೀಸಲು ಅರಣ್ಯ ಹೀಗೆ ಸಾಕಷ್ಟು ಸಮಸ್ಯೆಗಳ ಕುರಿತು ಗಮನಸೆಳೆದಾಗ ಸಮದಾನದಿಂದಲೇ ಉತ್ತರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಅರಣ್ಯ ಪ್ರಾಣಿಸಂಕುಲಗಳ ರಕ್ಷಣೆ ಹೀಗೆ ಪರಿಸರ ರಕ್ಷಣಗಾಗಿ ಜಮೀನ ಮೀಸಲಾಗಿಡಲಾಗಿದೆ ಅದಷ್ಟು ಬೇಗ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.


ಹುಂಚದ ಕಟ್ಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಘವೇಂದ್ರ ಹೆಚ್.ಅರ್, ಉಪಾಧ್ಯಕ್ಷೆ ಶೋಭಾ ರೇಣುಕಪ್ಪ,ಚೇತನ್,ಧರ್ಮಣ್ಣ, ಕಲಾವತಿ,ಸೌಮ್ಯ,ಸುಜಾತ,ಶೃತಿ,ಶಿವಾನಂದ,ಕಂದಾಯ ಪಶು ಅರೋಗ್ಯ ಅರಣ್ಯ ಅಬಕಾರಿ ಶಿಶುಕಲ್ಯಾಣಾಭಿವೃದ್ದಿ ಇಲಾಖೆ ಅಂಗನವಾಡಿ ಗ್ರಾಮಾಡಳಿತ ವಿವಿಧ ಇಲಾಖೆ ಅಧಿಕಾರಿಗಳುಪಿಡಿಓ ಷಣ್ಮುಖಪ್ಪ ಕಟ್ಟೆ ಮಹೇಶ್,ಪಾಲ್ಗೊಂಡಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

40 minutes ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

3 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

3 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

3 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

13 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

1 day ago