Headlines

ಹೆದ್ದಾರಿಪುರದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಇಲ್ಲಿನ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದ ಕಾರಣ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.



ರಿಪ್ಪನ್ ಪೇಟೆಯಿಂದ  ತೀರ್ಥಹಳ್ಳಿಗೆ ಹೋಗುವ ರಸ್ತೆ ಮಧ್ಯ ಹೆದ್ದಾರಿಪುರ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದಿಂದ ರಿಪ್ಪನ್ ಪೇಟೆ – ತೀರ್ಥಹಳ್ಳಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಖಾಸಗಿ ಬಸ್ ಹಾಗೂ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು.



ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿ ತಾವರ್ಯ ನಾಯ್ಕ್ ಹಾಗೂ ಅಕ್ಷಯ್ ಕುಮಾರ್ ರವರು ಮರ ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿ ಕೊಟ್ಟು ಸಾರ್ವಜನಿಕ ಪ್ರಶಂಸೆಗೆ ಪಾತ್ರರಾದರು.

Leave a Reply

Your email address will not be published. Required fields are marked *

Exit mobile version