ಹೊಸನಗರ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಕ್ಷೀಣಿಸುತ್ತಿದ್ದು ಇದನ್ನು ಬಲಪಡಿಸಲು ಹೊಸನಗರ ತಾಲ್ಲೂಕು ಕಾರ್ಯಕರ್ತರ ಸಭೆ ನಡೆಸಿ ಸಂಘಟನೆ ಮಾಡುವ ಉದ್ದೇಶದಿಂದ ಆಗಸ್ಟ್ 20 ಶನಿವಾರ 11 ಗಂಟೆಗೆ ಹೊಸನಗರ ಪ್ರವಾಸಿ ಮಂದಿರದ ಹತ್ತಿರವಿರುವ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಪತ್ರಿಕಾಘೋಷ್ಟಿ ನಡೆಸಿ ಮಾತನಾಡಿ, ಈ ಕಾರ್ಯಕರ್ತರ ಸಮಾವೇಶಕ್ಕೆ ತೀರ್ಥಹಳ್ಳಿ ವಿಧಾನಸಭಾ ಹೋಬಳಿಯ ಕಾರ್ಯಕರ್ತರು ನಗರ ಹೋಬಳಿಯ ಕಾರ್ಯಕರ್ತರು ಸಾಗರ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿ ಕೆರೆಹಳ್ಳಿ ಹೋಬಳಿಯ ಕಾರ್ಯಕರ್ತರು ಆಗಮಿಸಲಿದ್ದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್, ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕರಾದ ಶಾರದ ಪೂರ‍್ಯನಾಯ್ಕ್, ಭದ್ರಾವತಿಯ ಶಾರದ ಅಪ್ಪಾಜಿಗೌಡ, ಜಿಲ್ಲಾ ಜನತದಳ ಕಾರ್ಯಧ್ಯಕ್ಷರಾದ ರಾಮಕೃಷ್ಣ, ರಾಜ್ಯ ಮುಖಂಡರಾದ ಆರ್.ಎ ಚಾಬುಸಾಬ್ ಜನತಾದಳದ ಮಾಜಿ ತಾಲ್ಲೂಕು ಅಧ್ಯಕ್ಷರಾದ ಎಂ.ವಿ. ಜಯರಾಮ್ ಇನ್ನೂ ಮುಂತಾದವರು ಆಗಮಿಸಿ ಜೆಡಿಎಸ್ ಪಕ್ಷವನ್ನು ಬಲಗೊಳಿಸಲಿದ್ದಾರೆ ಎಂದರು.
ಅಧಿಕಾರ ಹಸ್ತಾಂತರ:
ಸುಮಾರು 20ವರ್ಷಗಳಿಂದ ಎಂ.ವಿ ಜಯರಾಮ್‌ರವರು ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ತಮ್ಮ ಕಾರ್ಯದ ಒತ್ತಡದಿಂದ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಆ ಸ್ಥಾನವನ್ನು ರಿಪ್ಪನ್‌ಪೇಟೆಯ ವರ್ತೇಶ್‌ರವರನ್ನು ನೂತನ ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷರನ್ನಾಗಿ ಜಿಲ್ಲಾಧ್ಯಕ್ಷ ಶ್ರೀಕಾಂತ್‌ರವರು ನೇಮಕ ಮಾಡಲಾಗಿದ್ದು ಈ ಸಂದರ್ಭದಲ್ಲಿ ಎಂ.ವಿ ಜಯರಾಮ್‌ರವರು ವರ್ತೇಶ್‌ರವರಿಗೆ ಅಧಿಕಾರ ಹಸ್ತಾಂತರಿಸಿದರು.
ಜೆಡಿಎಸ್ ಪಕ್ಷದ ಏಳಿಗೆಗಾಗಿ ದುಡಿಯುತ್ತೇನೆ: ವರ್ತೇಶ್
ಹೊಸನಗರ ತಾಲ್ಲೂಕು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವರ್ತೇಶ್‌ರವರು ಅಧಿಕಾರ ಸ್ವೀಕರಿಸಿ ಮಾತನಾಡಿ, ಕಾರ್ಯಕರ್ತರ ಸೇವೆಯೇ ನನ್ನ ಉಸಿರಾಗಿದ್ದು ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷ ಬೆಳಸುವುದರ ಜೊತೆಗೆ 2023ರ ವಿಧಾನಸಬಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಹಿಡಿಯಲಿದ್ದು ಮುಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಜೆಡಿಎಸ್ ಕಾರ್ಯಕರ್ತರ ಪಾತ್ರ ಈ ಸಂದರ್ಭದಲ್ಲಿ ಹಿರಿದಾಗಿದ್ದು ಎಲ್ಲರೂ ಒಟ್ಟಾಗಿ ಜೆಡಿಎಸ್ ಪಕ್ಷ ಬೆಳೆಸೋಣವೆಂದರು.
ಹಣದ ಹೊಳೆ ಎಂದು ಹೆದರಿಸುವವರ ಸಂಖ್ಯೆ ಹೆಚ್ಚು : ರಾಜಾರಾಂ
2023ರ ವಿಧಾನಸಭಾ ಚುನಾವಣೆಯಲ್ಲಿ ಹಣದ ಹೊಳೆ ಹರಿಯಲಿದೆ ಎಂದು ಪ್ರಚಾರ ಮಾಡುತ್ತಿದ್ದು ಇದರಿಂದ ತೀರ್ಥಹಳ್ಳಿ ಕ್ಷೇತ್ರಕ್ಕೆ ಚುನಾವಣೆಗೆ ನಿಲ್ಲುವವರಿಗೆ ಹೆದರಿಸುತ್ತಿದ್ದಾರೆ ತೀರ್ಥಹಳ್ಳಿ ಕ್ಷೇತ್ರದ ಜನರು ಹೊಸಬರು ಬೇಕು ಎಂದು ಹಂಬಲಿಸುತ್ತಿದ್ದು ಹಳೇ ಮುಖ ನೋಡಿ ಬೇಸರವಾಗಿದೆ ಬಿಜೆಪಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಸಚಿವರನ್ನು ಅವರ ಆಡಳಿತವನ್ನು ನೋಡಿ ಜನರು ರೋಸಿ ಹೋಗಿದ್ದಾರೆ ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ನನಗೆ ಜೆಡಿಎಸ್ ಪಕ್ಷದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು ಕಾರ್ಯಕರ್ತರು ತೀರ್ಥಹಳ್ಳಿ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡಬೇಕೆಂದು ಒಮ್ಮೆ ಗೆಲ್ಲಿಸಿ ನನ್ನ ಕೆಲಸವನ್ನು ನೋಡಿ ಎಂದರು.
ಈ ಅಧಿಕಾರ ಹಸ್ತಾಂತರದ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಸುಮತಿ ಆರ್ ಪೂಜಾರ್, ವರದರಾಜ್, ಗೋಪಾಲ ಎಸ್.ಕೆ, ಆರ್.ಎಸ್. ಮಂಜುನಾಥ್, ಈರಣ್ಣ, ಜಯನಗರ ವಾಸಪ್ಪಗೌಡ, ಷಣ್ಮುಖ ಜಯನಗರ, ರಘು ಆಚಾರ್, ಭಾಗ್ಯ ಗೋಪಾಲ್, ಜಿ.ಎಸ್ ವರದರಾಜ್, ಎಂ.ಪಿ. ರಮಾನಂದ, ಹೆಚ್ ಆರ್ ಪ್ರಕಾಶ್, ನಾಗೇಶ್, ಮಾಸ್ತಿಕಟ್ಟೆ ವಾಸಪ್ಪ ಗೌಡ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್