2023ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ : ಶಾರದ ಪೂರ್ಯನಾಯ್ಕ್

ಹೊಸನಗರ : 2023ರಲ್ಲಿ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲವೆಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಹೇಳಿದರು.

ಪಟ್ಟಣದ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲು ಜೆಡಿಎಸ್ ಪಕ್ಷವು ಬೇರೂರಿ ಅತ್ಯಂತ ಕ್ರಿಯಾಶೀಲವಾಗಿ ಇದ್ದದ್ದು ಈ ಹೊಸನಗರ ತಾಲ್ಲೂಕಿನಲ್ಲಿ ಕೆಲ ರಾಜಕೀಯ ಸ್ಥಿತ್ಯಂತರಗಳಿಗೆ ಕಾರ್ಯಕರ್ತರು ಚದುರಿದ್ದು ಅವರನ್ನು ಒಗ್ಗೂಡಿಸುವ ಕೆಲಸ ಮಾಡಬೇಕಾಗಿದೆ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಮಾಡಿರುವ ಅಭೂತಪೂರ್ವ ಜನಪರ ಯೋಜನೆಗಳಿಗೆ ರಾಜ್ಯದ ಎಲ್ಲಾ ವರ್ಗದ ಜನರು ಮೆಚ್ಚುಗೆ ಸೂಚಿಸಿದ್ದಾರೆ ಆದರೆ ಅದು ಮತವಾಗಿ ಪರಿವರ್ತನೆ ಆಗದೇ ಇರುವುದು ದುರದೃಷ್ಟಕರ ಎಂದರು.

ನಮ್ಮ ಕಾರ್ಯಕರ್ತರುಗಳು ಕುಮಾರಸ್ವಾಮಿಯವರು ಮಾಡಿರುವ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರನ್ನು ಸಂಪರ್ಕಿಸಿ 1ಬಾರಿ ಜೆಡಿಎಸ್ ಗೆ ಬೆಂಬಲಿಸುವಂತೆ ಮನವಿ ಮಾಡಬೇಕು,ಈ ಬಾರಿ ಜೆಡಿಎಸ್ ಕಾರ್ಯಕರ್ತರು ಅತಿ ಶ್ರಮವಹಿಸಿ ಕುಮಾರಸ್ವಾಮಿಯವರು 2023 ರಲ್ಲಿ  ಈ ರಾಜ್ಯದ ಮುಖ್ಯಮಂತ್ರಿಯಾಗುವ ಸನ್ನಿವೇಶಕ್ಕೆ ಸಾಕ್ಷಿಯಾಗಬೇಕು ಎಂದು ಹೇಳಿದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿದ್ದು ಈಗಲೂ ಕೂಡ ಪಕ್ಷದ ಪರ ಒಲವು ಹೊಂದಿದ್ದಾರೆ,ಮುಖಂಡರು ಹಾಗೂ ಕಾರ್ಯಕರ್ತರ ನಡುವಿನ ಸಂವಹನ ಕೊರತೆಯಿಂದ ಪಕ್ಷದ ಸಂಘಟನೆಯಲ್ಲಿ ಹಿನ್ನಡೆಯಾಗಿತ್ತು ಈಗ ತೀರ್ಥಹಳ್ಳಿ ಕ್ಷೇತ್ರದ ಯುವ ನಾಯಕ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ನಿಯೋಜಿತ ಅಭ್ಯರ್ಥಿ ಯಡೂರು ರಾಜಾರಾಮ್ ಅವರ ಸಂಘಟನಾ ಚತುರತೆಯಿಂದ ಚದುರಿಹೋಗಿದ್ದ ಪಕ್ಷದ ಹಳೆಯ ಕಾರ್ಯಕರ್ತರನ್ನು ಮತ್ತೆ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪಕ್ಷಕ್ಕೆ ಹಿಂತಿರುಗುತ್ತಿದ್ದು ಮುಂದಿನ ದಿನಗಳಲ್ಲಿ ತೀರ್ಥಹಳ್ಳಿಯಲ್ಲಿ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಹೇಳಿದರು.



ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ರಾದ ರಾಮಕೃಷ್ಣ ರವರು ಮಾತನಾಡಿ ಜೊಳ್ಳು ಕಾಳಿನಂತಹ ಕಾರ್ಯಕರ್ತರು ಪಕ್ಷ ಬಿಟ್ಟು ಹೋಗಿದ್ದು ಗಟ್ಟಿ ಕಾಳಿನಂತಹ ಕಾರ್ಯಕರ್ತರು ಪಕ್ಷದಲ್ಲಿ ಉಳಿದಿದ್ದಾರೆ ಅಂತಹ ಕಾರ್ಯಕರ್ತರನ್ನು ಬಳಸಿಕೊಂಡು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಚುನಾವಣೆ ಎದುರಿಸಬೇಕಾಗುತ್ತದೆ. ಪಕ್ಷದ ಕಾರ್ಯಕರ್ತರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವುದಕ್ಕೆ ಶ್ರಮಿಸಬೇಕು ಆ ಮೂಲಕ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕಿದೆ ಎಂದರು.


ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಯಡೂರು ರಾಜಾರಾಮ್ ಮಾತನಾಡಿ ನನ್ನ ಪ್ರಾಮಾಣಿಕತೆಯನ್ನು ಗುರುತಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನನ್ನನ್ನು ಕರೆಸಿ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ ಆ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಅತ್ಯಂತ ಪ್ರಾಮಾಣಿಕ ಜೆಡಿಎಸ್ ಕಾರ್ಯಕರ್ತರನ್ನು ಸಂಘಟಿಸಿ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದ್ದೇನೆ,ರಾಜಕೀಯ ಮಾಡಿದರೆ  ಜೆಡಿಎಸ್ ಪಕ್ಷದಲ್ಲೇ ಹೊರತು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಅಂತಹ ಸನ್ನಿವೇಶ ಸೃಷ್ಟಿಯಾದರೆ ರಾಜಕೀಯ ನಿವೃತ್ತಿಗೊಂಡು ಕೃಷಿ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ ಎಂದು ಹೇಳಿದರು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸನಗರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಎನ್ ವರ್ತೇಶ್ ವಹಿಸಿದ್ದರು.



ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ತ್ರಿಣಿವೆ ಜಯರಾಮ್ ಶೆಟ್ಟಿ,ನಿವೃತ್ತ ಯೋಧ ನಿಲ್ಸ್ ಕಲ್ ರಾಮಣ್ಣ, ಫಾರೂಖ್ ಹೊಸನಗರ ರವರುಗಳನ್ನು ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ಹಾಗೂ ಮುಖಂಡರು ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳಾದ ಕಲ್ಲೂರು ಮೇಘರಾಜ್, ಸುಮತಿ ಆರ್ ಪೂಜಾರಿ, ಆರ್ ಎನ್ ಮಂಜುನಾಥ್, ಜಿಎಸ್ ವರದರಾಜ್,ಚಂದ್ರಣ್ಣ ,ಯೂಸುಫ್ ಸಾಬ್,ಕಲ್ಲೂರು ಈರಣ್ಣ,ಲಕ್ಷ್ಮಿ ಬಟ್ಟೆಮಲ್ಲಪ್ಪ,ಮುಡುಬಾ ಧರ್ಮಪ್ಪ,ಜಯನಗರ ವಾಸಪ್ಪ,ಷಣ್ಮುಖ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

6 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

6 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

8 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

8 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

11 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

12 hours ago