ಭಾರಿ ಮಳೆಗೆ ಧರೆ ಕುಸಿತ : ಶಾಸಕರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಗ್ರಾಮಸ್ಥರ ಪ್ರತಿಭಟನೆ
ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಳವಳ್ಳಿ-ತಮ್ಮಡಿಕೊಪ್ಪ ಸಂಪರ್ಕ ರಸ್ತೆಯ ಧರೆ ಕುಸಿದು ಸಂಪರ್ಕ ಕಡಿತಗೊಳ್ಳುವ ಅಪಾಯದ ಅತಂಕದಲ್ಲಿ ಇರುವ ಹಿನ್ನೆಲೆಯಲ್ಲಿ ಮಳವಳ್ಳಿ ಮತ್ತು ತಮ್ಮಡಿಕೊಪ್ಪ ಗ್ರಾಮಸ್ಥರು ಇಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತ್ರತ್ವದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ಬೇಳೂರು ಮಳವಳ್ಳಿ-ತಮ್ಮಡಿಕೊಪ್ಪದ ಗ್ರಾಮದ ಸಂಪರ್ಕ ರಸ್ತೆಯು ಸಂಪೂರ್ಣ ಅಪಾಯದ ಸ್ಥಿತಿಯಲ್ಲಿದ್ದು ಈಗಾಗಲೇ ಈ…