ಬೈಕ್ ಅಪಘಾತ : ಅಪಘಾತವಾದ ಬೈಕ್‌ ಮೈಮೇಲೆ ಬಿದ್ದು ಸವಾರ ಸಾವು

ತೀರ್ಥಹಳ್ಳಿ : ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಬೈಕ್ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಇಂದು ಬೆಳಗಿನ ಜಾವ ಈ ಅಪಘಾತವಾಗಿದೆ. ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು 37 ವರ್ಷದ ರವಿನಾಯ್ಕ್ ಎಂದು ಗುರುತಿಸಲಾಗಿದ್ದು, ನಳೀನ್ ಕೊಪ್ಪ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ರಸ್ತೆ…

Read More

ರಿಪ್ಪನ್‌ಪೇಟೆಯಲ್ಲಿ ವಿಜ್ರಂಭಣೆಯಿಂದ ಜರುಗಿದ 75ನೇ ಸ್ವಾತಂತ್ರ ಅಮೃತ ಮಹೋತ್ಸವ :

ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಆಗಸ್ಟ್ ೧೩ ರಿಂದ ಹರ್‌ಗರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಂಡ ಜನತೆ ೧೫ ರ ಸೋಮವಾರ ಅಧಿಕೃತ ಧ್ವಜಸ್ತಂಭಗಳಲ್ಲಿ ಧ್ವಜಾರೋಹಣ ನೇರವೇರಿಸುವುದರೊಂದಿಗೆ ರಾಷ್ಟ ಗೌರವ ಸಲ್ಲಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ,ವೊ ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ…

Read More

ರಿಪ್ಪನ್‌ಪೇಟೆ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಈಶ್ವರ್ ಶೆಟ್ಟಿ ಆಯ್ಕೆ :

ರಿಪ್ಪನ್ ಪೇಟೆ : ಇಲ್ಲಿಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರಾಗಿ ಆರ್.ಈ. ಈಶ್ವರ್ ಶೆಟ್ಟಿ ಆಯ್ಕೆ ಆಗಿದ್ದಾರೆ. ರಿಪ್ಪನ್ ಪೇಟೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಸಮಿತಿಗೆ ಸೇರಲು ಆಕಾಂಕ್ಷಿಗಳಾಗಿ ಸುಮಾರು 82 ಜನ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಭಾರಿ ಪೈಪೋಟಿ ನಡೆದಿದ್ದು, ಇತ್ತೀಚಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಧರ್ಮದರ್ಶಿ ಸಮಿತಿ 9 ಜನರ ಸಮಿತಿ ಆಯ್ಕೆ ಮಾಡಿತ್ತು. ಈ ಆಯ್ಕೆಯಂತೆ ಮಾನ್ಯ ಜಿಲ್ಲಾಧಿಕಾರಿಗಳು ಇತ್ತೀಚಿಗೆ…

Read More

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಆರೋಪಿಗಳ ಬಂಧನ – ಒಬ್ಬನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ  ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್‌ ಸಿಂಗ್‌, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ  ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್‌ ಸಿಂಗ್‌ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಬೆಂಗಾವಲು ಜೀಪ್ ಅಪಘಾತ :

ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ಜೀಪ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು.  ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

Read More

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ. ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

Read More

ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ

ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು. ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.

Read More

ರಿಪ್ಪನ್ ಪೇಟೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಸಂಭ್ರಮ : ಸಂಭ್ರಮದ ಯಶಸ್ವಿಗೆ ಸಕಲ ಸಿದ್ಧತೆ : ಮಂಜುಳಾ ಕೇತಾರ್ಜಿ ರಾವ್

ರಿಪ್ಪನ್ ಪೇಟೆ : ಆಜಾದ್ ಕಿ ಅಮೃತ್ ಮಹೋತ್ಸವ ಅಂಗವಾಗಿ ರಿಪ್ಪನ್ ಪೇಟೆಯ ಗ್ರಾಮಾಡಳಿತ ಸಕಲಸಿದ್ಧತೆಯನ್ನು ಮಾಡಿದ್ದು 3000ಕ್ಕೂ ಅಧಿಕ ಜನರು ಈ ಸಂಭ್ರಮಕ್ಕೆ ಸಾಕ್ಷಿಗಳಾಗಲಿದ್ದಾರೆ ಎಂದು ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತರ್ಜಿ ರಾವ್ ಹೇಳಿದರು.  ಇಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಅವರು ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಆಜಾದ್ ಕೀ ಅಮೃತ್ ಮಹೋತ್ಸವವನ್ನು ಸಡಗರದಿಂದ ಆಚರಿಸಲು ದೇಶಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಸಿದ್ಧತೆಯನ್ನು ನಡೆಸುತ್ತಿದ್ದಾರೆ ಹಾಗೆಯೇ ನಮ್ಮ ರಿಪ್ಪನ್ ಪೇಟೆ ಗ್ರಾಮ…

Read More

ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ನೀವೆ ಹಿಂಗೆ ಎಡವಟ್ಟು ಮಾಡಿದ್ರೆ ಹೆಂಗೆ???? ಇದು ನಿಮ್ಮ ಅವಿವೇಕಿತನವೋ???? ಅಸಡ್ಡೆಯೋ????

ತೀರ್ಥಹಳ್ಳಿ: ದೇಶಾದ್ಯಂತ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶದ ಹಬ್ಬವಾಗಿ ಆಚರಿಸುತ್ತಿದ್ದು ಇಂದಿನಿಂದ ಆಗಸ್ಟ್ ಹದಿನೈದರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ.ದೇಶಪ್ರೇಮಿಗಳು ತ್ರಿವರ್ಣ ಧ್ವಜಕ್ಕೆ ಪೂಜೆ ನೆರವೇರಿಸಿ ಮನೆಯ ಮುಂಭಾಗ ಹಾಗೂ ಮನೆಯ ಮೇಲೆ ಬಾವುಟವನ್ನು ಹಾರಿಸಿ ನಮಸ್ಕರಿಸುತ್ತಿದ್ದಾರೆ. ಆದರೆ ಕೆಲವು ಸರ್ಕಾರಿ ಅಧಿಕಾರಿಗಳು  ತ್ರಿವರ್ಣಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರಾ ಎಂಬ ಪ್ರೆಶ್ನೆ ಮೂಡುತ್ತಿದೆ. ಕಾರಣ ತೀರ್ಥಹಳ್ಳಿ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೆರವೇರಿಸಿದ ಧ್ವಜಾರೋಹಣದಲ್ಲಿ ಎಡವಟ್ಟು ಎದ್ದು ಕಾಣಿಸುತ್ತಿದ್ದು ಎಲ್ಲಾ ಕಡೆ ಟ್ರೊಲ್ ಆಗುತ್ತಿದೆ….

Read More