ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…

Read More

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಿದ ಶಾಲಾ ಯುವ ಸಂಸತ್ ಚುನಾವಣೆ

ರಿಪ್ಪನ್ ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಯುವ ಸಂಸತ್ ಚುನಾವಣೆಯನ್ನು ವಿಭಿನ್ನವಾಗಿ ರಿಪ್ಪನ್ ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಮತದಾನಕ್ಕೆ ಸರ್ಕಾರ ಹದಿನೆಂಟು ವಯೋಮಿತಿ ನಿಗದಿ ಪಡಿಸಿದೆ ಆದರೆ ಮೊದಲ ಮತದಾನ ಮಾಡುವಾಗ ಯುವ ಮತದಾರರಲ್ಲಿ ಆತಂಕ ದುಗುಡ ಎದ್ದುಕಾಣುತ್ತದೆ ಕೆಲವರು ಅಂಜಿಕೆಯಿಂದಲೇ ಮತದಾನದಿಂದ ಹಿಂದೆ ಜರುಗುವುದು ಹೆಚ್ಚು ಇದನ್ನು ಗಮನದಲ್ಲಿಟ್ಟುಕೊಂಡು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿದೆಸೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ತರಗತಿ…

Read More

ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ತೀವ್ರ ನಿಗಾ ಘಟಕ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಅದರಲ್ಲಿ ಮುಖ್ಯವಾಗಿ ಐಸಿಯು ಸಮಸ್ಯೆ ಮತ್ತು ಆಸ್ಪತ್ರೆಯ ಐಸಿಯು ತೀವ್ರ ನಿಗಾ ಘಟಕ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ  ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್‌ಗಳನ್ನು ಅಳವಡಿಸಿಲಾಗಿದ್ದು ಅದನ್ನು ಮಂಗಳವಾರ ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಸಚಿವರು ನನಗೆ ಇದೊಂದು ಸಂತೋಷದ ವಿಚಾರ. ಸಾರ್ವಜನಿಕ ಆಸ್ಪತ್ರೆಗೆ ಹಣ ಬಿಡುಗಡೆ ಮಾಡಿಸುವ ಮತ್ತು ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಪ್ರಯತ್ನ ನೆಡೆಯುತ್ತಿದೆ….

Read More

ಹೆದ್ದಾರಿಪುರದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಇಲ್ಲಿನ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದ ಕಾರಣ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ರಿಪ್ಪನ್ ಪೇಟೆಯಿಂದ  ತೀರ್ಥಹಳ್ಳಿಗೆ ಹೋಗುವ ರಸ್ತೆ ಮಧ್ಯ ಹೆದ್ದಾರಿಪುರ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದಿಂದ ರಿಪ್ಪನ್ ಪೇಟೆ – ತೀರ್ಥಹಳ್ಳಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಖಾಸಗಿ ಬಸ್ ಹಾಗೂ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿ ತಾವರ್ಯ ನಾಯ್ಕ್ ಹಾಗೂ ಅಕ್ಷಯ್ ಕುಮಾರ್…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ‌ ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಎಂ ಬಿ ಲಕ್ಷಣ ಗೌಡರವರ ಮನೆ ಮುಂದಿನ ಬೃಹತ್ ಮರ ಭಾರಿ‌ ಮಳೆ ಗಾಳಿಗೆ ರಸ್ತೆಗೆ ಅಡ್ಡಲಾಗಿ ನೆಲಕ್ಕುರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಭಾರಿ ಗಾಳಿ ಮಳೆಗೆ ಬೃಹತ್ ಮರ ನೆಲಕ್ಕುರುಳಿದ ಪರಿಣಾಮ ಹಲವಾರು ಲೈಟ್ ಕಂಬಗಳು ತುಂಡಾಗಿದ್ದು ಹಲವಾರು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮರ ನೆಲಕ್ಕುರುಳಿದ ವಿಷಯ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸ್ ಇಲಾಖೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದಲ್ಲಿ ಭಾರಿ ಮಳೆಯಲ್ಲಿಯೂ…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ :  ಶಿವಮೊಗ್ಗ ರಸ್ತೆಯ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಹದಿನಾರನೇ ಮೈಲಿಕಲ್ ಬಳಿ ಡಿಕ್ಕಿಯಾಗಿದ್ದು,ಅಪಘಾತದ ಭೀಕರತೆಗೆ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲಿ ಮತಪಟ್ಟಿದ್ದಾನೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್ ಪೇಟೆ ಸಮೀಪದ ಹರತಾಳು ಕ್ರಾಸ್ ನಲ್ಲಿ ಪಿಕಪ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ:

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮದ ಹರತಾಳು  ಕ್ರಾಸ್ ಬಳಿ ಇಕೋ ಕಾರು ಮತ್ತು ಮಹೀಂದ್ರ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ರಿಪ್ಪನ್ ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತ್ತಿದ್ದ ಮಹೀಂದ್ರ ಪಿಕಪ್ (KA-15 A 2541) ವಾಹನ ಹಾಗೂ ಜೋಗ ಪ್ರವಾಸಕ್ಕೆಂದು ಬಂದು ವಾಪಸ್ ಬೆಳ್ತಂಗಡಿ ಗ್ರಾಮಕ್ಕೆ ತೆರಳುತ್ತಿದ್ದ ಇಕೋ ಕಾರು (KA-19 AB 8866) ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಬಾಳೂರು ಗ್ರಾಮದ ಹರತಾಳು ಕ್ರಾಸ್ ನಲ್ಲಿ ನಡೆದಿದೆ. ಅದೃಷ್ಟವಶಾತ್…

Read More

ಹೊಸನಗರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಈಗ ತಾಲೂಕು ಕಚೇರಿ ಕಟ್ಟಡದಲ್ಲೇ ಲಭ್ಯ

ಹೊಸನಗರ : ಹಲವಾರು ವರ್ಷಗಳಿಂದ ಪಟ್ಟಣದ ಚರ್ಚ್ ರಸ್ತೆಯ ಖಾಸಗಿ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಸೇವೆ ಇನ್ನು ಮುಂದೆ ತಾಲೂಕು ಕಚೇರಿಯ ಹಳೆಯ ಕಟ್ಟಡದ ಗ್ರಹರಕ್ಷಕದಳದ ಕಚೇರಿ ಮುಂಭಾಗದ ಕೊಠಡಿಯಲ್ಲಿ ಲಭ್ಯವಾಗಲಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಪ್ರಭಾವತಿ ತಿಳಿಸಿದ್ದಾರೆ.  ಸಾರ್ವಜನಿಕರು ಇನ್ನು ಮುಂದೆ ತಾಲೂಕು ಕಚೇರಿಯಲ್ಲಿ ಅಲ್ಪಸಂಖ್ಯಾತರಿಗೆ ಸಂಬಂಧಪಟ್ಟ ಮಾಹಿತಿಗಳನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ. ನೋಂದಣಾಧಿಕಾರಿ ಕಛೇರಿ ಸ್ಥಳಾಂತರಿಸುವಂತೆ ಒತ್ತಾಯ  ಸಾರ್ವಜನಿಕರಿಗೆ ಅತ್ಯಾವಶ್ಯಕವಾದ ಉಪ ನೋಂದಣಾಧಿಕಾರಿಗಳ ಕಚೇರಿ ಸೇವೆ…

Read More

ಪತ್ರಿಕಾ ರಂಗವು ಸಾರ್ವಜನಿಕರ ಧ್ವನಿಯಾಗಿ ಅವರ ಕುಂದು ಕೊರತೆಗಳನ್ನು ಸರ್ಕಾರಕ್ಕೆ ತಿಳಿಸುವಂತಾಗಬೇಕು : ಆರಗ ಜ್ಞಾನೇಂದ್ರ

ಹೊಸನಗರ : ಇಂದಿನ ದಿನದಲ್ಲಿ ಗ್ರಾಮೀಣ ಪತ್ರಿಕೋದ್ಯಮ ಪರಿಣಾಮಕಾರಿಯಾಗಿದ್ದು.. ಇಲ್ಲಿಯ ವರದಿಗಳು ರಾಜ್ಯಮಟ್ಟದ ಪತ್ರಿಕೆಗಳ ಮುಖಪಟದಲ್ಲಿ ಮನ್ನಣೆ ಪಡೆಯುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ಪಟ್ಟರು. ಭಾನುವಾರದಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಹೊಸನಗರ ತಾ. ಶಾಖೆ, ಇವರಿಂದ ಪಟ್ಟಣದ ಗಾಯತ್ರಿ ಮಂದಿರದಲ್ಲಿ ಆಯೋಜಿಸಿದ್ದ, ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನತಂತ್ರ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಎಂಬಂತೆ ಪತ್ರಿಕಾ ರಂಗವು 4 ನೇ ಅಂಗವಾಗಿದೆ….

Read More

ರಿಪ್ಪನ್‌ಪೇಟೆ : ಮತಾಂತರಕ್ಕೆ ಯತ್ನ ಆರೋಪ – ಹಿಂದೂಪರ ಸಂಘಟನೆಗಳಿಂದ ತರಾಟೆ

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿನ ಖಾಸಗಿ ವಸತಿ ಗೃಹದ ಸಭಾ ಭವನದಲ್ಲಿ ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ಹಿಂದೂ ಧರ್ಮದ ಕೆಲವರನ್ನು ಮತಾಂತರ ಮಾಡುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ರಿಪ್ಪನ್ ಪೇಟೆ ಹಿಂದೂ ಪರಸಂಘಟನೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ವಸತಿ ಗೃಹದ ಸಭಾಭವನಕ್ಕೆ ಧಾವಿಸಿ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಸಂಘಟನೆಯವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಭಾನುವಾರ ನಡೆದಿದೆ. ನಡೆದಿದ್ದೇನು…? ಪ್ರಾರ್ಥನಾ ಕೇಂದ್ರ ಹೊರತುಪಡಿಸಿ ಖಾಸಗಿ ಸ್ಥಳಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ರಿಪ್ಪನ್‌ಪೇಟೆ ಗ್ರಾಮಪಂಚಾಯತ್…

Read More