w
Headlines
Home » ರಿಪ್ಪನ್ ಪೇಟೆ ಸಮೀಪದ ಹರತಾಳು ಕ್ರಾಸ್ ನಲ್ಲಿ ಪಿಕಪ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ:

ರಿಪ್ಪನ್ ಪೇಟೆ ಸಮೀಪದ ಹರತಾಳು ಕ್ರಾಸ್ ನಲ್ಲಿ ಪಿಕಪ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ:

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮದ ಹರತಾಳು  ಕ್ರಾಸ್ ಬಳಿ ಇಕೋ ಕಾರು ಮತ್ತು ಮಹೀಂದ್ರ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.


ರಿಪ್ಪನ್ ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತ್ತಿದ್ದ ಮಹೀಂದ್ರ ಪಿಕಪ್ (KA-15 A 2541) ವಾಹನ ಹಾಗೂ ಜೋಗ ಪ್ರವಾಸಕ್ಕೆಂದು ಬಂದು ವಾಪಸ್ ಬೆಳ್ತಂಗಡಿ ಗ್ರಾಮಕ್ಕೆ ತೆರಳುತ್ತಿದ್ದ ಇಕೋ ಕಾರು (KA-19 AB 8866) ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಬಾಳೂರು ಗ್ರಾಮದ ಹರತಾಳು ಕ್ರಾಸ್ ನಲ್ಲಿ ನಡೆದಿದೆ.


ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ,ಸಣ್ಣಪುಟ್ಟ ಗಾಯಗಳಾಗಿರುವವರನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ.


ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆ ಸಿಬ್ಬಂದಿಗಳು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.


ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ .

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.