ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿನ ಖಾಸಗಿ ವಸತಿ ಗೃಹದ ಸಭಾ ಭವನದಲ್ಲಿ ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ಹಿಂದೂ ಧರ್ಮದ ಕೆಲವರನ್ನು ಮತಾಂತರ ಮಾಡುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ರಿಪ್ಪನ್ ಪೇಟೆ ಹಿಂದೂ ಪರಸಂಘಟನೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ವಸತಿ ಗೃಹದ ಸಭಾಭವನಕ್ಕೆ ಧಾವಿಸಿ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಸಂಘಟನೆಯವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಭಾನುವಾರ ನಡೆದಿದೆ.
ನಡೆದಿದ್ದೇನು…?
ಪ್ರಾರ್ಥನಾ ಕೇಂದ್ರ ಹೊರತುಪಡಿಸಿ ಖಾಸಗಿ ಸ್ಥಳಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ರಿಪ್ಪನ್ಪೇಟೆ ಗ್ರಾಮಪಂಚಾಯತ್ ಗೆ ಅರ್ಜಿ ಸಲ್ಲಿಸಿದ್ದರು ಅದನ್ನು ಗ್ರಾಮಾಡಳಿತ ತಿರಸ್ಕರಿಸಿ ಯಾವುದೇ ಕಾರಣಕ್ಕೂ ಖಾಸಗಿ ಸ್ಥಳಗಳಲ್ಲಿ ಅವಕಾಶವಿಲ್ಲವೆಂದು ಹೇಳಿತ್ತು.ಆದರೆ ಅರ್ಜಿ ಸಲ್ಲಿಸಿದ ಪ್ರತಿಯನ್ನು ಇಟ್ಟುಕೊಂಡು ಖಾಸಗಿ ವಸತಿಗೃಹದವರಿಗೆ ತೋರಿಸಿ ನಮಗೆ ಪಂಚಾಯತ್ ಅನುಮತಿ ಇದೆಯೆಂದು ಸಭಾಂಗಣ ಬಾಡಿಗೆ ಪಡೆದಿದ್ದಾರೆ.
ಭಾನುವಾರ ಖಾಸಗಿ ಸಭಾಂಗಣದಲ್ಲಿ ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪಟ್ಟಣದ ಹಿಂದೂಪರ ಸಂಘಟನೆಗಳು ಮತ್ತು ಸಾರ್ವಜನಿಕರು ಪೊಲೀಸರೊಂದಿಗೆ ಸ್ಥಳಕ್ಕೆ ಧಾವಿಸಿ ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿ ಎಲ್ಲಾರನ್ನು ಕಳುಹಿಸಿಕೊಟ್ಟಿದ್ದಾರೆ.
ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಹಿಂದೂಪರ ಸಂಘಟನೆಯ ಸುಧೀಂದ್ರ ಪೂಜಾರಿ ಕಳೆದ ಕೆಲವು ವರ್ಷಗಳಿಂದ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ದಲಿತರು ಹಿಂದುಳಿದವರು ಮತ್ತು ಬಡವರನ್ನು ಗುರಿಯನ್ನಾಗಿಟ್ಟುಕೊಂಡು ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದ ಮತಾಂಧ ಶಕ್ತಿಗಳು ಹಿಂದೂ ಧರ್ಮದವರನ್ನು ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದಾರೆ.ಈ ಬಗ್ಗೆ ರಕ್ಷಣೆ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕೆಂದು ತಿಳಿಸಿದರು.
ಈ ಸಂಧರ್ಭದಲ್ಲಿ ಹಿಂದೂಪರ ಮುಖಂಡರಾದ ಸುಂದರೇಶ್ ,ವೈ ಜೆ ಕೃಷ್ಣ, ಸುಧೀಂದ್ರ ,ರಾಘವೇಂದ್ರ ,ನಿರೂಪ್ ಕುಮಾರ್ ,ರಂಜನ್ ಕುಮಾರ್ , ಮತ್ತು ಗವಟೂರು ವಾರ್ಡ್ ಗ್ರಾಪಂ ಸದಸ್ಯ ಆಸೀಫ಼್ ಸೇರಿದಂತೆ ಇನ್ನಿತರರಿದ್ದರು.
ನಮಸ್ಕಾರ, ನಾನು ರಫಿ ರಿಪ್ಪನ್ಪೇಟೆ.
'ಪೋಸ್ಟ್ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್ಮ್ಯಾನ್ ನ್ಯೂಸ್.
ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್ಮ್ಯಾನ್ ನ್ಯೂಸ್.”
ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ."
ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ.
'ಪೋಸ್ಟ್ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ.
ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು."
ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ.
ಸ್ನೇಹಪೂರ್ವಕವಾಗಿ,
ರಫಿ ರಿಪ್ಪನ್ಪೇಟೆ
ಸಂಪಾದಕರು, ಪೋಸ್ಟ್ಮ್ಯಾನ್ ನ್ಯೂಸ್
🌐 [www.postmannewskannada.com]
Leave a Reply