w
Headlines
Home » ಶಾಲೆಯಿಂದ ಮನೆಗೆ ತೆರಳುತಿದ್ದ ಮಗು ಕಾರು ಡಿಕ್ಕಿಯಾಗಿ ಸಾವು : ಆನಂದಪುರ ಸಮೀಪದಲ್ಲೊಂದು ಹೃದಯವಿದ್ರಾವಕ ಘಟನೆ

ಶಾಲೆಯಿಂದ ಮನೆಗೆ ತೆರಳುತಿದ್ದ ಮಗು ಕಾರು ಡಿಕ್ಕಿಯಾಗಿ ಸಾವು : ಆನಂದಪುರ ಸಮೀಪದಲ್ಲೊಂದು ಹೃದಯವಿದ್ರಾವಕ ಘಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚೆನ್ನ ಕೊಪ್ಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.

ಚೆನ್ನಕೊಪ್ಪ ಗ್ರಾಮದಲ್ಲಿ ಶಾಲೆ ಮುಗಿದ ನಂತರ ವಿದ್ಯಾರ್ಥಿ ಮನೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಅಭಿಷೇಕ್ (6 ) ವರ್ಷ  ಸಾವಿಗೀಡಾದ ಪುಟಾಣಿ ವಿದ್ಯಾರ್ಥಿಯಾಗಿದ್ದಾನೆ.


ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ವಿದ್ಯಾರ್ಥಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಗುವಿಗೆ ಗಂಭೀರ ಗಾಯಗಳಾಗಿವೆ ಕೂಡಲೇ ಸ್ಥಳೀಯರು ವಾಹನದಲ್ಲಿ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗ ಮಧ್ಯೆ ಮಗು ಸಾವನ್ನಪ್ಪಿದೆ.



ಮೃತದೇಹವನ್ನು ಸಾಗರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.


ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.