Headlines

ರಿಪ್ಪನ್‌ಪೇಟೆ : ನಿವೃತ್ತ ಎಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯ ಬೀಳ್ಕೊಡುಗೆ |ASI

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 30 ವರ್ಷಗಳಲ್ಲಿ ಭದ್ರಾವತಿ ,ಶಿವಮೊಗ್ಗ ಮತ್ತು ರಿಪ್ಪನ್‌ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಗಣಪತಿ ಎಂ ರವರನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಶಿವಾನಂದ ಕೋಳಿ ಮತ್ತು ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬೀಳ್ಕೊಟ್ಟರು. ನಂತರ ಮಾತನಾಡಿದ ನಿವೃತ ಎ ಎಸ್ ಐ ಗಣಪತಿ ಎಂ 30…

Read More

ರಿಪ್ಪನ್‌ಪೇಟೆಯ ಶಶಿಕಲಾ ಕೆ ಎನ್ ರವರಿಗೆ 2022-23 ರ ಸಾಲಿನ AIWAA ಅವಾರ್ಡ್ |

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರೊಫೇಷನಲ್ ಬ್ರೈಡಲ್ ಮೇಕಪ್ ಕೋಚಿಂಗ್ ನಡೆಸುವ ಮೂಲಕ ಹಲವಾರು ನಿರುದ್ಯೋಗಿ ಯುವತಿಯರಿಗೆ ಮೇಕಪ್ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವು ನೀಡುತ್ತಿರುವ ಶಶಿಕಲಾ ಕೆ ಎನ್ ಅವರಿಗೆ ಆಲ್ ಇಂಡಿಯಾ ವಿಮೆನ್ ಅಚಿವರ್ (AIWAA) ಅವಾರ್ಡ್ ದೊರೆತಿದೆ. AIWAA -2022-23 ನೇ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ KASSIA ಸಭಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಇಂಟರ್ನ್ಯಾಷನಲ್ ಮೋಟಿವೇಷನಲ್ ಸ್ಪೀಕರ್  ಸೀಮಾ ವಿಕಾಸ್ ಗಾಡಿಯಾ ರವರು…

Read More

ರಿಪ್ಪನ್‌ಪೇಟೆ : ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆ – ಕಳೆದ ವರ್ಷ ನಾಪತ್ತೆಯಾಗಿದ್ದ ಮಹಿಳೆ ಎಂಬ ಶಂಕೆ | Human skeleton

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ  ಅಸ್ಥಿಪಂಜರ ಆಕೆ ಧರಿಸಿದ್ದ ವಸ್ತ್ರದ ಜೊತೆಗೆ ಪತ್ತೆಯಾಗಿರುವ ಘಟನೆ ನಡೆದಿದೆ. ವರ್ಷದ ಹಿಂದೆ ನಾಪತ್ತೆಯಾಗಿದ್ದ ವೃದ್ದೆ ಎಂಬ ಶಂಕೆ : ಹಾರಂಬಳ್ಳಿ ಗ್ರಾಮದ ಮಹಿಳೆ ಗಿಡ್ಡಮ್ಮ (80) ಕಳೆದ 12-07-2021ರಂದು ನಾಪತ್ತೆಯಾಗಿದ್ದರು.ಕೂಡಲೇ ಗಿಡ್ಡಮ್ಮ ಅವರ ಮಕ್ಕಳು ರಿಪ್ಪನ್‌ಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಾಪತ್ತೆ  ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ಆದರೆ ವೃದ್ದೆ ಎಲ್ಲೂ ಪತ್ತೆಯಾಗಿರಲಿಲ್ಲ. ನಾಪತ್ತೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ…

Read More

ಮರುಜೇವಣಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧ ಆಯ್ಕೆ | VFC

ಹೊಸನಗರ ಅರಣ್ಯ ಇಲಾಖೆ ವ್ಯಾಪ್ತಿಯ ಕಾರಕ್ಕಿ-ಹೊಸಹಳ್ಳಿ ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಮುಂದಿನ ಐದು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಕೋಡೂರು ಸಮೀಪದ ಮುತ್ತಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ ಉಮೇಶ್ ಸಿ ಜಾಗದ್ದೆ ರವರನ್ನು ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಿದ್ದಾರೆ. ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್, ನಿರ್ವಹಣಾ ಸಮಿತಿ ಸದಸ್ಯರುಗಳಾಗಿ …

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ| volleyball

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .    ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ…

Read More

ಎರಡು ಕಾರುಗಳು,ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ : ನಾಲ್ವರಿಗೆ ತೀವ್ರ ಗಾಯ-ಮೆಗ್ಗನ್ ಗೆ ದಾಖಲು |Accident

ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಸಂಜೆ ಸಂಭವಿಸಿದೆ.  ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ :[KABBADDI]

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ಕಬ್ಬಡ್ಡಿ ಪಂದ್ಯಾವಳಿಯಲ್ಲಿ  ಬಾಲಕಿಯರ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು  ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು  ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ  ಸರ್ಕಾರಿ…

Read More

ಮೋದಿ ಜನ್ಮದಿನಾಚರಣೆಯ ಪ್ರಯಕ್ತ ಅಕ್ಟೋಬರ್ 1ರಂದು ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮೋದಿ ಜನ್ಮ ದಿನಾಚರಣೆ ಅಂಗವಾಗಿ  ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು ಈಗಾಗಲೇ ಹುಂಚ ಬಳಿಯಲ್ಲಿರುವ ಬಿಲ್ಲೇಶ್ವರ ಕುಮದ್ವತಿ ಉಗಮ ಸ್ಥಾನದ ಬಳಿಯ ಪುಷ್ಕರಣೆಯ ಅಮೃತ ಸರೋವರ ಸ್ವಚ್ಚತಾ ಅಂದೋಲನ ಮತ್ತು ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ, ಎಸ್‌ಸಿ ಎಸ್ ಟಿ ಜನಾಂಗದ 50 ಅಯ್ದ ಬಡಮಕ್ಕಳಿಗೆ…

Read More

ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಆರೋಗ್ಯ ಸದೃಡಗೊಳಿಸಿಕೊಳ್ಳಬೇಕು : ಚಂದ್ರಕಲಾ | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ

ರಿಪ್ಪನ್‌ಪೇಟೆ : ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ ಹೇಳಿದರು.        ಸಮೀಪದ ಬೆಳ್ಳೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಬೆಳ್ಳೂರು ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ ವತಿಯಿಂದ ಗರ್ಭೀಣಿ ಮತ್ತು ಬಾಣಂತಿಯರಿಗಾಗಿ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ…

Read More

ಕೆ ಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ…

Read More