ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇವತ್ತು ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿವಿಧ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಬೆಳಗಿನ ಜಾವ ಎನ್ ಐಎ(NIA) ದಾಳಿ ನಡೆದಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ದಾಳಿಯಾಗಿದೆ. ಸಂಘಟನೆಯೊಂದರ ಮುಖಂಡನ್ನು ವಶಕ್ಕೆ ಪಡೆದು, ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಮನೆಯಲ್ಲಿ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ರಾತ್ರಿ 2 ಗಂಟೆ ಹೊತ್ತಿಗೆ ಬಂದಿದ್ದ ಎನ್ಐಎ ಅಧಿಕಾರಿಗಳು ಬೆಳಗಿನ ಜಾವ 5 ಗಂಟೆವರೆಗೆ ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿ ಶೋಧ ಕಾರ್ಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.