ಹುoಚದ ಕಟ್ಟೆ: ಇಲ್ಲಿನ ಸಮೀಪದ ಗುಂಡಿಬೈಲಿನ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಗೆ ಹಸು ಅಡ್ಡ ಬಂದು ವ್ಯಕ್ತಿಯೊಬ್ಬರಿಗೆ ಗಾಯವಾದ ಘಟನೆ ನಡೆದಿತ್ತು.
ಇದೇ ಸಂಧರ್ಭದಲ್ಲಿ ಅದೇ ದಾರಿಯಲ್ಲಿ ಸಾಗುತಿದ್ದ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಕ್ಷಣ ವಾಹನವನ್ನು ನಿಲ್ಲಿಸಿ ಗಾಯಾಳುವನ್ನು ಸಂತೈಸಿ ಕೂಡಲೇ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ತಮ್ಮ ಬೆಂಗಾವಲು ವಾಹನದಲ್ಲಿ ಕಳುಹಿಸಿಕೊಟ್ಟರು.
 ಸಾಗರದ ಬರದಹಳ್ಳಿಯ ಹಾಲಸ್ವಾಮಿ ಎನ್ನುವ ವ್ಯಕ್ತಿ ಅಪಘಾತವಾಗಿದ್ದು ಇವರನ್ನು ಹೆಚ್ಚಿನ ಚಿಕಿತ್ಸೆಗೆ ಸಚಿವ ಆರಗ ಜ್ಞಾನೇಂದ್ರ ರವರ ಬೆಂಗಾವಲು ವಾಹನದಲ್ಲಿ ಕಳುಹಿಸಿಕೊಡಲಾಗಿದೆ.
ಸಚಿವರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
		 
                         
                         
                         
                         
                         
                         
                         
                         
                         
                        