ಸಾಗರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಶಾಲೆಯ ಬಳಿ ವಾಹನವೊಂದು ಢಿಕ್ಕಿಯಾಗಿ ಪರಾರಿಯಾದ ಕಾರಣ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ವಾಹನ ಮುಂಭಾಗದಿಂದ ಢಿಕ್ಕಿ ಹೊಡೆದು,ಸುಮಾರು ದೂರ ಯುವಕನ ದೇಹವನ್ನು ಎಳೆದುಕೊಂಡು ಹೋಗಿದೆ. ಬೈಕ್ ಚಲಾಯಿಸುತ್ತಿದ್ದ ಕುಗ್ವೆ ಗ್ರಾಮದ ನಿವಾಸಿ ರಂಜಿತ್ ಕುಮಾರ್ (26) ಎನ್ನುವ ಯುವಕ ರಸ್ತೆಗೆ ಅಪ್ಪಳಿಸಿ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ರಸ್ತೆಗೆ ಬಿದ್ದ ಪರಿಣಾಮ ತಲೆ ಒಡೆದು ತೀವ್ರವಾಗಿ ರಕ್ತ ಸ್ರಾವವಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಢಿಕ್ಕಿಯಾಗಿ ಪರಾರಿಯಾದ ವಾಹನದ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.