POSTMAN NEWS

ನೈಜ ಸುದ್ದಿ ನೇರ ಬಿತ್ತರ..

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ| volleyball

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .

 
 ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ. ಉಪಾಧ್ಯಕ್ಷರಾದ  ನೆವಟೂರು ದೇವೇಂದ್ರಪ್ಪ ಗೌಡ .ಪ್ರಾಚಾರ್ಯ ಎ. ಮಂಜುನಾಥ್ . ಕಾಲೇಜು ಅಭಿವೃದ್ಧಿ ಸಮಿತಿಯವರು. ಉಪನ್ಯಾಸಕರು, ಸಿಬ್ಬಂದಿ ವರ್ಗದವರು,  ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.